ಬೆಳಗಾವಿ: ಓದಿಕೋ ಎಂದು ತಾಯಿ (Mother) ಬುದ್ಧಿ ಹೇಳಿದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಫ್ಲ್ಯಾಟ್‌ನಲ್ಲಿ ನಡೆದಿದೆ.
ಸಮರ್ಥ ಸುರೇಶ ಭಜಂತ್ರಿ (14) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾದ ಬಾಲಕ. ದೀಪಾವಳಿ ರಜೆ (Deepavali) ಇದೆ ಅಂತ ತಿರುಗಬೇಡ, ಓದಿಕೋ ಎಂದು ತಾಯಿ ಬುದ್ಧಿ ಹೇಳಿದ್ದರು. ಇದನ್ನೂ ಓದಿ: ಶಕ್ತಿ ಯೋಜನೆ ಇಕ್ಕಟ್ಟಿನಲ್ಲಿ ಸಾರಿಗೆ ಇಲಾಖೆ – ಮೀಸಲಿಟ್ಟ ಹಣ ಹೈಸ್ಪೀಡ್‌ನಲ್ಲಿ ಖರ್ಚು
- Advertisement
ತಾಯಿಯ ಈ ಮಾತಿಗೆ ಮನನೊಂದು ತಮ್ಮ ಮನೆಯ ಬೆಡ್‌ರೂಂನಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
- Advertisement
ಸಮರ್ಥ ಮೂಡಲಗಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದ. ಈ ಸಂಬಂಧ ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.