ರಾಜಾ ನರೇಶ್ ಸೂರಿಯಾ
ಚೆನ್ನೈ: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಆತನ ಸ್ನೇಹಿತ ಸೇರಿದಂತೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ತಮಿಳುನಾಡಿನ ಪುದುಚೇರಿಯಲ್ಲಿ ನಡೆದಿದೆ.
Advertisement
ವಿದ್ಯಾರ್ಥಿನಿ ಮನೆಯಿಂದ ಕಾಣೆಯಾಗಿದ್ದು, ನಂತರ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿತ್ತು. ಪರೀಕ್ಷೆ ಮಾಡಿದ ವೈದ್ಯರು ಆಕೆಯ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ. ಜೊತೆಗೆ ಡ್ರಗ್ಸ್ ಸೇವನೆ ಮಾಡಿಸಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಸಂತ್ರಸ್ತೆಯ ಸ್ನೇಹಿತ ನರೇಶ್(19), ರಾಜಾ ಮತ್ತು ಸೂರಿಯಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಏನಿದು ಪ್ರಕರಣ?
ಶನಿವಾರ ಸಂತ್ರಸ್ತೆ ಕಾರ್ಯಕ್ರಮದ ನಿಮಿತ್ತ ಮನೆಗೆ ತನ್ನ ಗೆಳೆಯ ನರೇಶ್‍ನನ್ನು ಕರೆಯಲು ಹೋಗಿದ್ದಾಳೆ. ಅಲ್ಲಿ ವಿದ್ಯಾರ್ಥಿನಿಗೆ ಡ್ರಗ್ ಮಿಕ್ಸ್ ಮಾಡಿರುವ ಪಾನೀಯವನ್ನು ನೀಡಿದ್ದಾನೆ. ಅದನ್ನು ಕುಡಿದ ನಂತರ ವಿದ್ಯಾರ್ಥಿನಿ ಮೇಲೆ ಗೆಳೆಯನೇ ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಸಂತ್ರಸ್ತೆ ಪ್ರಜ್ಞಾಹೀನಳಾಗಿದ್ದು, ನಂತರ ನರೇಶ್ ಸ್ನೇಹಿತರಾದ ರಾಜಾ ಮತ್ತು ಸೂರಿಯಾ ಇಬ್ಬರೂ ಕೂಡ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತ ವಿದ್ಯಾರ್ಥಿನಿ ತುಂಬಾ ಸಮಯವಾದರೂ ಮನೆಗೆ ಹಿಂದಿರುಗಿಲ್ಲ ಎಂದು ಆಕೆಯ ಸ್ನೇಹಿತರು ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ದಾರೆ. ಆದರೆ ಶನಿವಾರ ಸಂಜೆ ವೇಳೆಗೆ ಸಂತ್ರಸ್ತೆ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಮನೆಗೆ ಹಿಂದಿರುಗಿದ್ದಾಳೆ. ತಕ್ಷಣ ಆಕೆಯ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಮೂವರು ಪುರುಷರಿಂದ ಅತ್ಯಾಚಾರಕ್ಕೊಳಗಾಗಿರುವುದು ತಿಳಿದು ಬಂದಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಕಡಲೂರು ಕೇಂದ್ರ ಜೈಲಿಗೆ ಕಳುಹಿಸಿದ್ದಾರೆ. ಮೂರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪೋಕ್ಸೋ ಕಾಯ್ದೆಯಡಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.