ನವದೆಹಲಿ: ಗುರ್ಗಾಂವ್‍ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್‍ನ 2ನೇ ತರಗತಿಯ ಪ್ರದ್ಯೂಮ್ ಠಾಕೂರ್ ಹತ್ಯೆಯನ್ನು ನೆನಪಿಸುವಂತ ಮತ್ತೊಂದು ಪ್ರಕರಣ ದೆಹಲಿಯಲ್ಲಿ ನಡೆದಿದೆ. ಶಾಲೆಯ ಟಾಯ್ಲೆಟ್ ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಈಶಾನ್ಯ ದೆಹಲಿಯ ಕರಾವಲ್ ನಗರದಲ್ಲಿ ನಡೆದಿದೆ.
16 ವರ್ಷದ ತುಷಾರ್ ಕುಮಾರ್ ಮೃತಪಟ್ಟಿರುವ ವಿದ್ಯಾರ್ಥಿ. ಗುರುವಾರ ಶಾಲೆಯ ಶೌಚಾಲಯದಲ್ಲಿ ಪ್ರಜ್ಞಾಹೀನ ಸ್ಥಿತಿಯಿಲ್ಲಿ 9ನೇ ತರಗತಿಯ ವಿದ್ಯಾರ್ಥಿ ತುಷಾರ್ ಪತ್ತೆಯಾಗಿದ್ದ. ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ಆತನನ್ನು ಕರೆದೊಯ್ದಲಾಯ್ತು. ಆದರೆ ಅಷ್ಟರಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತುಷಾರ್ ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕೆಲವು ವಿದ್ಯಾರ್ಥಿಗಳು ಆತನಿಗೆ ಹೊಡೆದು ಶೌಚಾಯದಲ್ಲಿ ಸಾಯಲು ಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement
Advertisement
ತುಷಾರ್ ನ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಇರಲಿಲ್ಲ. ಆದರೆ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣ ತಿಳಿದು ಬರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಪೊಲೀಸರು ಅಪರಿಚಿತರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ತುಷಾರ್ ಶೌಚಾಲಯದಲ್ಲಿ ಪ್ರಜ್ಞಾಹೀನನಾಗಿ ಬಿದ್ದಿರುವುದನ್ನು ಮೊದಲಿಗೆ ನೋಡಿದ ವಿದ್ಯಾರ್ಥಿಗಳು ಹಾಗೂ ಆತನ ಸಹಪಾಠಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ.
Advertisement
ತುಷಾರ್ ಹೊಟ್ಟೆ ನೋವಿನಿಂದ ಬಳಲುತ್ತಿದ್ದನು ಎಂದು ಶಾಲಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ. ಇದರಿಂದ ವಿದ್ಯಾರ್ಥಿಯ ಪೋಷಕರು ತಮ್ಮ ಮಗನನ್ನು ಕೊಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತುಷಾರ್ ಕರಾವಲ್ ನಗರದಲ್ಲಿ ವಾಸಿಸುತ್ತಿದ್ದನು. ಈ ನಗರ ಶಾಲೆ ಇರುವ ಸ್ಥಳವಾಗಿದ್ದು, ವಿದ್ಯಾರ್ಥಿಯ ಕುಟುಂಬದ ಸದಸ್ಯರು ಮತ್ತು ಕೆಲವು ಸ್ಥಳೀಯರು ರಸ್ತೆಗಳಿದು ತುಷಾರ್ ಸಾವಿನ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ತುಷಾರ್ ಮೃತಪಟ್ಟ ಜಿಟಿಬಿ ಆಸ್ಪತ್ರೆಯ ಅಧಿಕಾರಿಗಳು ಮತ್ತು ಪೊಲೀಸರ ಜೊತೆ ಸಂಪರ್ಕದಲ್ಲಿದ್ದು ಮಾಹಿತಿ ಪಡೆಯುತ್ತಿರುವುದಾಗಿ ಶಾಸಕ ಕಪಿಲ್ ಮಿಶ್ರಾ ಹೇಳಿದ್ದಾರೆ.
2017ರ ಸೆಪ್ಟಂಬರ್ ನಲ್ಲಿ ಗುರಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ಕ್ಲಾಸ್ ಬಾಲಕ ಪ್ರದ್ಯುಮನ್ ನನ್ನು ಹತ್ಯೆ ಮಾಡಲಾಗಿತ್ತು. ಅದೇ ಶಾಲೆಯ ಹಿರಿಯ ವಿದ್ಯಾರ್ಥಿಯೊಬ್ಬ ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ಈ ಕೃತ್ಯವೆಸಗಿದ್ದ ಎಂದು ಪೊಲೀಸರು ತಿಳಿಸಿದ್ದರು.