ಚಂಡೀಗಢ: ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಕ್ಕಾಗಿ ಹರಿಯಾಣ (Haryana) ಸರ್ಕಾರ ಕಟ್ಟಡಗಳನ್ನು ಧ್ವಂಸ (Demolish) ಮಾಡುವ ಕಾರ್ಯ ಕೈಗೊಂಡಿದ್ದು, ಮೂರನೇ ದಿನ 2 ಡಜನ್ ಮೆಡಿಕಲ್ (Medical) ಹಾಗೂ ಇತರೆ ಅಂಗಡಿಗಳನ್ನು ನೆಲಸಮಗೊಳಿಸಿದೆ.
ಹಿಂಸಾಚಾರ ಪೀಡಿತ ನುಹ್ (Nuh) ಪ್ರದೇಶದಿಂದ ಸುಮಾರು 20 ಕಿಲೋ ಮೀಟರ್ ದೂರದಲ್ಲಿರುವ ತೌರುನಲ್ಲಿ (Tauru) ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿಕೊಂಡು ವಾಸಿಸುತ್ತಿದ್ದ ಸುಮಾರು 250 ವಲಸಿಗರ ಗುಡಿಸಲುಗಳನ್ನು ಗುರುವಾರ ಸಂಜೆ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಇದೀಗ ಕಾರ್ಯಾಚರಣೆಯ ಮುಂದಿನ ಭಾಗವಾಗಿ ಶನಿವಾರ ಇಲ್ಲಿನ ಆಸ್ಪತ್ರೆಯ ಮುಖ್ಯ ದ್ವಾರದ ಎದುರುಗಡೆ ಇದ್ದ ಅಂಗಡಿಗಳು ಸೇರಿದಂತೆ ಔಷಧಾಲಯಗಳನ್ನು ತೆರವೊಗೊಳಿಸಲಾಗಿದೆ. ಬುಲ್ಡೋಜರ್ ಕಾರ್ಯಾಚರಣೆಗಳು ವಿವಿಧ ಸ್ಥಳಗಳಲ್ಲಿ ಕಟ್ಟಡಗಳನ್ನು ಧ್ವಂಸಗೊಳಿಸಿದ್ದು, ಜಿಲ್ಲಾಡಳಿತ ತಂಡ ಕಾರ್ಯಾಚರಣೆ ಸ್ಥಳದಲ್ಲೇ ಇದ್ದವು. ಇದನ್ನೂ ಓದಿ: ಪರಸ್ಪರ ಭೇಟಿಯಾದ ಮೋದಿ, ಯೋಗಿ ಸಹೋದರಿಯರು- ವೀಡಿಯೋ ವೈರಲ್
ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ (Buldozer) ಮೂಲಕ ಕೆಡವಿದ್ದು, ಕೆಲವರು ಬಂಧನಕ್ಕೆ ಹೆದರಿ ಪಲಾಯನ ಮಾಡಿದ್ದಾರೆ. ಕಳೆದ ಹಲವು ವರ್ಷಗಳಿಂದ ತೆರವಿಗೆ ಸಾಧ್ಯವಾಗದೇ ಇದ್ದ ಎಲ್ಲಾ ಅಕ್ರಮ ಕಟ್ಟಡಗಳನ್ನು ಜಿಲ್ಲಾಡಳಿತ ತೆರವುಗೊಳಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯ ಶಾಸಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕ ಅಫ್ತಾಬ್ ಅಹಮದ್ (Aftab Ahmad) ಈ ಬುಲ್ಡೋಜರ್ ಕ್ರಮವನ್ನು ವಿರೋಧಿಸಿದ್ದಾರೆ. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ
ಈ ಕುರಿತು ಟ್ವೀಟ್ (Tweet) ಮಾಡಿರುವ ಅಫ್ತಾಬ್ ಅಹಮದ್, ಕೇವಲ ಬಡವರ ಮನೆಗಳಷ್ಟೇ ಅಲ್ಲ, ಜನಸಾಮಾನ್ಯರ ನಂಬಿಕೆಯೂ ಇದರೊಂದಿಗೆ ನಾಶವಾಗುತ್ತಿದೆ. ಒಂದು ತಿಂಗಳ ಹಿಂದೆ ನೋಟಿಸ್ ನೀಡಿ ಇಂದು ಮನೆ, ಅಂಗಡಿಗಳನ್ನು ನೆಲಸಮ ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆಡಳಿತ ವೈಫಲ್ಯಗಳನ್ನು ಮರೆಮಾಚಲು ಸರ್ಕಾರವು ತಪ್ಪು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಬರೆದು ಕಟ್ಟಡಗಳನ್ನು ಧ್ವಂಸಗೊಳಿಸುವ ವಿಡಿಯೋದೊಂದಿಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ
ಅಸ್ಸಾಂನ ವಲಸಿಗರು ನುಹ್ ಜಿಲ್ಲೆಯ ತೌರು ಪಟ್ಟಣದ ಮೊಹಮ್ಮದ್‌ಪುರ ರಸ್ತೆಯ ವಾರ್ಡ್ ಸಂಖ್ಯೆ ಒಂದರಲ್ಲಿ ಹರಿಯಾಣ ನಗರ ಪ್ರಾಧಿಕಾರದ ಜಮೀನಿನಲ್ಲಿ ಗುಡಿಸಲುಗಳನ್ನು ಸ್ಥಾಪಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಸುಮಾರು ಒಂದು ಎಕರೆ ಪ್ರದೇಶದಲ್ಲಿ 250ಕ್ಕೂ ಹೆಚ್ಚು ಗುಡಿಸಲುಗಳನ್ನು ನಿರ್ಮಿಸಲಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಜನರು ಇಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ
ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ಕಾರ್ಯಾಚರಣಾ ಸ್ಥಳದಲ್ಲಿ ನಿಯೋಜಿಸಿದ್ದು, ಸರ್ಕಾರದ ಹಲವು ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಬುಲ್ಡೋಜರ್ ಕಾರ್ಯಾಚರಣೆ ನಡೆಯಿತು. ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶ ಮಾದರಿಯಲ್ಲಿ ಹರಿಯಾಣದಲ್ಲಿ ಬುಲ್ಡೋಜರ್ ಕ್ರಮ ಕೈಗೊಳ್ಳಲಾಗುವುದು ಎಂದು ಇಲ್ಲಿನ ಮುಖ್ಯಮಂತ್ರಿ 2 ದಿನಗಳ ಹಿಂದೆ ಸೂಚಿಸಿದ್ದರು. ಇದನ್ನೂ ಓದಿ: ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ
ಅಕ್ರಮವಾಗಿ ಗುಡಿಸಲಿನಲ್ಲಿ ನೆಲೆಸಿದ್ದ ನಿವಾಸಿಗಳು ಜುಲೈ 31ರಂದು ಹರಿಯಾಣದಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದು, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಆದೇಶದ ಮೇರೆಗೆ ಧ್ವಂಸ ಕಾರ್ಯಾಚರಣೆ ನಡೆದಿದೆ ಎಂದು ನುಹ್ ಎಸ್‌ಡಿಎಂ ಅಶ್ವಿನಿ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಫ್ರಿಡ್ಜ್‌ಗಾಗಿ 7 ತಿಂಗಳ ಗರ್ಭಿಣಿಯ ಜೀವವೇ ಹೋಯ್ತು!
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]