ಚಂಡೀಗಢ: ಒಂದು ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಗುಮಾಸ್ತನ ಕೆಲಸ ಮಾಡುತ್ತಿದ್ದಾರೆ.
34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 1 ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಸಿಧು ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದ ಕೊಠಡಿ ಸಂಖ್ಯೆ 10 ರಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ
Advertisement
Advertisement
ಈಗ ಅವರನ್ನು 90 ರೂಪಾಯಿ ದಿನಗೂಲಿಗೆ ಗುಮಾಸ್ತನ ಕೆಲಸಕ್ಕೆ ನೇಮಿಸಲಾಗಿದೆ. ಮೊದಲ 3 ತಿಂಗಳು ಕೂಲಿ ನೀಡದೇ ತರಬೇತಿ ನೀಡಲಾಗುತ್ತದೆ. ಒಂದು ವರ್ಷದ ಅವಧಿಯಲ್ಲಿ ಅವರು ದುಡಿದ ಒಟ್ಟು ಹಣವು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಣಕಾಸಿನ ವಿಷಯಕ್ಕೆ ಗೆಳೆಯನನ್ನೆ ಕೊಲೆ ಮಾಡಿಸಿದ ಕಿಡಿಗೇಡಿ
Advertisement
Sidhu’s diet-
Rosemary Tea,Coconut water,Amul lactose free milk
Flak/Melon/Chia seeds etc etc
Almonds,walnut etc etc
Kiwi,Strawberry, melon etc etc , salad of every kind and much more.
Sidhu’s duty- checking files in an A/C room
ਕੈਦੀ ਹੈ ਕੇ ਸਰਕਾਰ ਦਾ ਜਵਾਈ ?? pic.twitter.com/xSMCESHZ7w
— Parambans Singh Romana (@ParambansRomana) May 25, 2022
Advertisement
ಕೆಲಸದ ಸಮಯ ಹೇಗೆ?: ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಸಿಧು ಕೆಲಸ ಮಾಡುತ್ತಾರೆ. ಇದರ ನಡುವೆ 2 ಗಂಟೆಗಳ ಕಾಲ ವಿರಾಮ ನೀಡಲಾಗುತ್ತದೆ. ಅವರ ಕೊಠಡಿ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.