ಯಾದಗಿರಿ: ಜಿಲ್ಲೆಯಲ್ಲಿ ಹವಾಮಾನ ಬದಲಾವಣೆಯಿಂದಾಗಿ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ವೈರಲ್ ಫೀವರ್ (Viral Fever) ಹೆಚ್ಚಾಗುತ್ತಿದೆ.
ಮಕ್ಕಳಲ್ಲಿ ಕೆಮ್ಮು, ನೆಗಡಿ, ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪೋಷಕರು ಆಸ್ಪತ್ರೆಗೆ ಮುಗಿಬೀಳುತ್ತಿದ್ದಾರೆ. ನಿತ್ಯ ವೈದ್ಯರು 150ಕ್ಕೂ ಅಧಿಕ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದು, ಮಳೆಯಿಂದ ಹವಾಮಾನ ಬದಲಾಗುತ್ತಿರುವ ಕಾರಣ ಈ ರೀತಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 2,200ಕ್ಕೆ ಏರಿಕೆ
ಆಸ್ಪತ್ರೆಗಳಲ್ಲಿ ಓಪಿಡಿ ಚೀಟಿ ವಿತರಿಸಿರುವ ಕೌಂಟರ್ ಸಂಖ್ಯೆಯನ್ನು ಹೆಚ್ಚಿಸಿದರೂ ಕೂಡ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಇರುವ ಬೆಡ್‌ಗಳಲ್ಲಿಯೇ ಅಡ್ಜಸ್ಟ್ ಮಾಡಿಕೊಂಡು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಈ ಕುರಿತು ಮಕ್ಕಳ ತಜ್ಞ ವೈದ್ಯ ಡಾ.ಕುಮಾರ್ ಅಂಗಡಿ ಮಾಹಿತಿ ನೀಡಿದ್ದು, ಮಕ್ಕಳಿಗೆ ವೈರಲ್ ಜ್ವರ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಪೋಷಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಯಾವುದೇ ಭಯಪಡುವ ಅಗತ್ಯವಿಲ್ಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಗತ್ಯ ಬಿದ್ದರೆ ಮತ್ತೊಂದು ವಾರ್ಡ್ ಓಪನ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಜಯದೇವ ಹೃದ್ರೋಗ ಆಸ್ಪತ್ರೆಗೆ ಸಂದರ್ಶನದ ಮೂಲಕ ನಿರ್ದೇಶಕರ ಆಯ್ಕೆ