ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾದ ಶೂಟಿಂಗ್ ಕುಂಟುತ್ತಾ ಸಾಗಿದೆ. ಸದ್ಯ ಚಿತ್ರದ ಕ್ಲೈಮ್ಯಾಕ್ಸ್ (Climax) ದೃಶ್ಯದ ಚಿತ್ರೀಕರಣವನ್ನು ಮಾಡಲು ನಿರ್ದೇಶಕ ಸುಕುಮಾರನ್ (Sukumaran) ಪ್ಲ್ಯಾನ್ ಮಾಡಿದ್ದು, ಅದೊಂದು ರೋಮಾಂಚನಕಾರಿ ನೀಡುವಂತಹ ಸನ್ನಿವೇಶವಾಗಿದೆ ಎಂದು ಹೇಳಲಾಗುತ್ತಿದೆ. ಈ ದೃಶ್ಯವನ್ನು ತಿರುಪತಿ ಜಿಲ್ಲೆಯ ಪೂರ್ವ ಘಟ್ಟದಲ್ಲಿರುವ ಸ್ವರ್ಣಮುಖಿ (Swarnamukhi) ನದಿಯ ತೀರದಲ್ಲಿ ಶೂಟ್ ಮಾಡಲು ಚಿತ್ರತಂಡ ನಿರ್ಧರಿಸಿದೆ.
Advertisement
ಕ್ಲೈಮ್ಯಾಕ್ಸ್ ಸನ್ನಿವೇಶದಲ್ಲಿ ಅಲ್ಲು ಅರ್ಜುನ್ ಜೊತೆ ಫಾಸಿಲ್ ಕೂಡ ಭಾಗಿಯಾಗಲಿದ್ದಾರಂತೆ. ಈ ದೃಶ್ಯಕ್ಕೆ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ರಕ್ತ ಚಂದನವನ್ನು ಕಳ್ಳ ಮಾರ್ಗದಲ್ಲಿ ಸಾಗಿಸುವ ಪುಷ್ಪರಾಜನ ವಿರುದ್ಧ ಭನ್ವಿರ್ ಸಿಂಗ್ ಮಾಡುವ ದಾಳಿಯೇ ಕ್ಲೈಮ್ಯಾಕ್ಸ್ ದೃಶ್ಯ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಗುಂಟೂರು ಖಾರ ಸವಿಯಲು ಬರುತ್ತಿದ್ದಾರೆ ರಮ್ಯಾ ಕೃಷ್ಣ
Advertisement
Advertisement
ಈ ನಡುವೆ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.
Advertisement
ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ.