ನೆಲಮಂಗಲ: ರಿಯಲ್ ಎಸ್ಟೇಟ್ ಮಾಫಿಯಾದ ವ್ಯಕ್ತಿಯೊಬ್ಬರು ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವುದರಿಂದ ಪುಟಾಣಿಗಳು ಕಂಗಾಲಾಗಿರುವ ಘಟನೆ ನೆಲಮಂಗಲ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಹುಟ್ಟೂರಿನಲ್ಲಿ ನಡೆದಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿದ್ದು, 30 ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ. ಶಾಸಕರ ಬೆಂಬಲಿಗ ವ್ಯಕ್ತಿಯಿಂದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವ ಆರೋಪ ಕೇಳಿಬರುತ್ತಿದೆ. ಇದಕ್ಕೆ ಶಾಸಕರ ಕುಮ್ಮಕ್ಕು ಇದೆ ಎಂಬ ಗಂಭೀರವಾದ ಆರೋಪವನ್ನು ಸಾರ್ವಜನಿಕರು ಮಾಡುತ್ತಿದ್ದಾರೆ.
ಅಂಗನವಾಡಿ ಕೇಂದ್ರದ ಜಾಗ ವಿವಾದ ಎಂದು ಬೀಗ ಹಾಕಲಾಗಿದೆ. ಎಲ್ಲಾ ದಾಖಲೆಗಳು ಸರಿಯಿದ್ದರು ಅಂಗನವಾಡಿ ಕೇಂದ್ರವನ್ನು ತೆರೆಯಲು ಅಧಿಕಾರಿಗಳ ಮೀನಾಮೇಷ ಮಾಡುತ್ತಿದ್ದಾರೆ. ಅಧಿಕಾರಿಗಳು ಶಾಸಕರ ಒತ್ತಡಕ್ಕೆ ಮಣಿದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದರು, ಯಾವುದೇ ಪ್ರಯೋಜನವಾಗಿಲ್ಲ ಎಂದು ನೆಲಮಂಗಲ ಮಹಿಳಾ ಮತ್ತು ಮಕ್ಕಳ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾರ್ಚ್ 25ಕ್ಕೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ- ಪ್ರಧಾನಿ ಭಾಗಿ
ನೆಲಮಂಗಲ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳ ನಡೆಯಿಂದ ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ಇದ್ದರೂ, ಮಕ್ಕಳ ಶಾಲೆ ತೆರೆಯಲು ಮೀನಾಮೇಷ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡ್ತೀವಿ: ಗುಲಾಂ ನಬಿ ಅಜಾದ್