ಡೆಹ್ರಾಡೂನ್: ಉತ್ತರಾಖಂಡದ (Uttarakhand) ಚಮೋಲಿಯಲ್ಲಿ (Chamoli) ಮತ್ತೆ ಮೇಘಸ್ಫೋಟ (Cloudburst) ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ಬುಧವಾರ (ಸೆ.17) ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮೇಘಸ್ಫೋಟ ಸಂಭವಿಸಿದೆ. ಭಾರೀ ಪ್ರಮಾಣದ ನೀರು ಹರಿದು ಬಂದಿದ್ದು, 6 ಕಟ್ಟಡಗಳು ನೆಲಸಮಗೊಂಡಿವೆ.ಇದನ್ನೂ ಓದಿ: ಬೆಂಗಳೂರಲ್ಲಿ ಧಾರಾಕಾರ ಮಳೆ; ಹಲವೆಡೆ ಅವಾಂತರ – ರಸ್ತೆಗೆ ಉರುಳಿದ ಮರ, ವಿದ್ಯುತ್ ಕಂಬ
ಇನ್ನೂ 5ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಸದ್ಯ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಲೋಕೋಪಯೋಗಿ ಇಲಾಖೆಯ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಜೊತೆಗೆ ಜೆಸಿಬಿ ಮತ್ತು ಇತರ ಉಪಕರಣಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಅವಶೇಷಗಳಡಿಯಲ್ಲಿ ಸಿಲುಕಿದ್ದ ಇಬ್ಬರನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಸ್ಥಳದಲ್ಲೇ ಆಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡ ಬೀಡುಬಿಟ್ಟಿವೆ ಎಂದು ತಿಳಿಸಿದ್ದಾರೆ.
ಇನ್ನೂ ಕೆಲವು ದಿನ ಚಮೋಲಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೂ ಮುನ್ನ ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್ ಆದೇಶ