ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದ್ದು, ನಿನ್ನೆ ಸಂಜೆ ಏಕಾಏಕಿ ಸೃಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ ಹಾಕಲಾಗಿದ್ದ ಶಿಬಿರಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದೆ. ಈವರೆಗೆ 15 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
Advertisement
ದೇಶಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹ ಸೃಷ್ಟಿಯಾಗಿದೆ. ಕಣಿವೆ ತಟದಲ್ಲಿ ಹರಿಯುತ್ತಿದ್ದ ನದಿ ಒಂದೇ ಸಮನೆ ಉಕ್ಕಿ ಹರಿದಿದ್ದು ಅಮರನಾಥ ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈಗಾಗಲೇ ಘಟನೆಯಲ್ಲಿ 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಗೊಂಡ ಹಲವರನ್ನು ಏರ್‌ಲಿಫ್ಟ್ ಮಾಡಿ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ವಿಜಯಪುರದಲ್ಲೂ ಕಂಪಿಸಿದ ಭೂಮಿ – ಓಡೋಡಿ ಮನೆಯಿಂದ ಹೊರ ಬಂದ ಜನತೆ
Advertisement
ಮೇಘಸ್ಫೋಟದಿಂದ ಸುಮಾರು ಎರಡು ಸಾವಿರ ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದು ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. NDRF, SDRF, BSF ಸೇರಿದಂತೆ ಸೇನಾ ಸಹಾಯದಿಂದ 10 ತಂಡಗಳನ್ನು ರಕ್ಷಣೆಗಾಗಿ ರಚಿಸಲಾಗಿದ್ದು ಕ್ಷಿಪ್ರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಅಮರನಾಥ ಯಾತ್ರೆಗೆ ಜೂನ್ 30 ರಂದು ಚಾಲನೆ ಸಿಕ್ಕಿತ್ತು. ಮೊದಲ ತಂಡದಲ್ಲಿ 4,890 ಭಕ್ತರು ಯಾತ್ರೆ ಕೈಗೊಂಡಿದ್ದರು. 43 ದಿನಗಳ ಯಾತ್ರೆಯು ಕಳೆದ ಗುರುವಾರ ಆರಂಭವಾಗಿದ್ದು ಅಗಸ್ಟ್ 11 ರಂದು ಕೊನೆಗೊಳ್ಳಲಿದೆ.
Advertisement
Advertisement
ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ನಿನ್ನೆ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್‍ಪ್ರಸಿದ್ಧವಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್‍ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‍ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್‍ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಚಾಲನೆ ನೀಡಿದ್ದರು.
The news of many devotees being injured due to cloudburst near the holy #amarnath cave is extremely painful.
My deepest condolences to the bereaved family.
I pray to Mahadev for safety of all devotees. ???? pic.twitter.com/pNSj1mCEJN
— KDPS Champion Jr. (@KDPSChampionJr) July 8, 2022
ಕರ್ನಾಟಕದಿಂದಲೂ ಸಾಕಷ್ಟು ಭಕ್ತರು ಅಮರನಾಥ ಯಾತ್ರೆಗೆ ತೆರಳಿದ್ದಾರೆ. ಹಾಗಾಗಿ ಘಟನೆಯ ಬಳಿಕ ಅಮರನಾಥ ಯಾತ್ರೆಗೆ ತೆರಳಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಹೆಲ್ಪ್‍ಲೈನ್‍ನನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಹೆಲ್ಪ್ ಲೈನ್ ನಂಬರ್ – 080-1070, 22340676ಗೆ ಕರೆ ಮಾಡಬಹುದಾಗಿದೆ.