ಬೆಳಗಾವಿ: ಗ್ಯಾರಂಟಿ ಯೋಜನೆ(Guarantee Scheme) ಮಾತ್ರ ನಂಬಿಕೊಂಡು ಚುನಾವಣೆ(Election) ಎದುರಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕರು (Congress MLA’s) ಬೇಸರ ವ್ಯಕ್ತಪಡಿಸಿದ್ದಾರೆ.
ಖಾಸಗಿ ಹೋಟೆಲಿನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ (CLP Meeting) ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವು ಶಾಸಕರು ಮಾತನಾಡಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ – ಡಿಸಿಎಂ ಸುಳಿವು

ಗ್ಯಾರಂಟಿ ಬಿಟ್ಟು ನಮಗೆ ಅಭಿವೃದ್ಧಿ ಯೋಜನೆಗಳನ್ನು ಕೊಡಿ. ಜನರು ಗ್ಯಾರಂಟಿಗಳ ಬಗ್ಗೆ ಶ್ಲಾಘನೆ ಮಾಡಿ ಮಾತಾಡುತ್ತಿಲ್ಲ. ಗ್ಯಾರಂಟಿಯೇ ನಮಗೆ ಚುನಾವಣೆಯಲ್ಲಿ ಕೆಲಸ ಮಾಡುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಜನರು ದೇವಸ್ಥಾನ, ಸಭಾ ಭವನ, ರಸ್ತೆ ಅಭಿವೃದ್ಧಿ ಸೇರಿ ಹಲವು ಕಾರ್ಯಕ್ರಮಗಳಿಗೆ ಅನುದಾನ ಕೇಳುತ್ತಿದ್ದಾರೆ. ಮುಖ್ಯವಾಗಿ ರಸ್ತೆಯ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಸರ್ಕಾರ ನಮ್ಮ ನೆರವಿಗೆ ಬರಬೇಕು ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

