ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ – ಫಲಾನುಭವಿಗಳಿಗೆ 1 ಲಕ್ಷ ರೂ. ಹೊರೆ ಕಡಿಮೆ ಮಾಡಲು ನಿರ್ಧಾರ

Public TV
2 Min Read
Siddaramaiah 2 1

ಬೆಂಗಳೂರು: ಮುಖ್ಯಮಂತ್ರಿಗಳವರ ಒಂದು ಲಕ್ಷ ಮನೆ ಯೋಜನೆ (CM 1 lakh Housing Scheme) ಅಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ (BJP Government) ಯೂನಿಟ್ ವೆಚ್ಚ ಹೆಚ್ಚಳಕ್ಕೆ ಒಳಗಾಗಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ 1 ಲಕ್ಷ ರೂ. ನಂತೆ 121.53 ಕೋಟಿ ರೂ. ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಇದನ್ನೂ ಓದಿ: ಅತ್ತಿಗೆಯಿಂದಲೇ ದರ್ಶನ್ ಅಣ್ಣನಿಗೆ ಬಲ: ವಿಜಯಲಕ್ಷ್ಮಿ ಆಪ್ತೆ ಲತಾ ಜೈಪ್ರಕಾಶ್

Zameer Ahmed Khan

ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ನೇತೃತ್ವದಲ್ಲಿ ಸಿಎಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಗರದ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಟಿಬಿ ಡ್ಯಾಂ ಭರ್ತಿ, 28 ಕ್ರಸ್ಟ್‌ ಗೇಟ್‌ ಓಪನ್‌ – 83 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ

ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ 2017, ಸೆಪ್ಟೆಂಬರ್ 23 ರಂದು ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ ರೂ., ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ ರೂ., ಎಸ್ಸಿ-ಎಸ್ಟಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು. ನಂತರ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚ 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್‌ಟಿ ಸೇರಿ ಸೇರಿ 11.20 ಲಕ್ಷ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು.

ಇದೀಗ ಸರ್ಕಾರದ ಮಹತ್ವದ ತೀರ್ಮಾನದಿಂದ ಸಬ್ಸಿಡಿ ಹೊರತು ಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ, ಎಸ್ಸಿ-ಎಸ್ಟಿ ವರ್ಗ 6.70ಲಕ್ಷ ರೂ. ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ. ಈ ಹಿಂದೆ ಕ್ರಮವಾಗಿ 8.50 ಲಕ್ಷ ರೂ. ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು. ಇದನ್ನೂ ಓದಿ: ಡಿವೋರ್ಸ್ ಬಳಿಕ ಮಾಜಿ ಪತ್ನಿಗೆ ಪ್ರೀತಿ ತೋರಿಸಿದ ಹಾರ್ದಿಕ್‌- ಮತ್ತೆ ಒಂದಾಗ್ತಾರಾ?

ಈ ತೀರ್ಮಾನ 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್‌ಲೈನ್‌ ಅರ್ಜಿಗಳಿಗೆ ಅನ್ವಯ ಆಗದು ಎಂದು ಹೇಳಲಾಗಿದೆ. ಇದನ್ನೂ ಓದಿ:ಪ್ರೇಯಸಿ ಅವಾಯ್ಡ್ ಮಾಡಿದ್ದಕ್ಕೆ ಸ್ನೇಹಿತೆಯ ಕೊಲೆ – ಕೋರಮಂಗಲ ಪಿಜಿ ಯುವತಿ ಮರ್ಡರ್ ಕೇಸ್‌ಗೆ ಟ್ವಿಸ್ಟ್‌!

Share This Article