– ಆಸ್ಪತ್ರೆ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನದ ಮೂಲಕ ಅಂಬುಲೆನ್ಸ್ ಸೇವೆ
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಅಂಬುಲೆನ್ಸ್‌ಗಳನ್ನು ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು.
Advertisement
ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯ ಕವಚ ಯೋಜನೆಯಡಿ 710 ಅಂಬುಲೆನ್ಸ್ ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ 155 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲೆನ್ಸ್ ಆಗಿವೆ. ಇಂದು ಲೋಕಾರ್ಪಣೆಗೊಂಡಿರುವ 120 ಅಂಬುಲೆನ್ಸ್ ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲೆನ್ಸ್ ಆಗಿವೆ ಎಂದು ತಿಳಿಸಿದರು.
Advertisement
Advertisement
ಅಂಬುಲೆನ್ಸ್ ಸೇವೆ ಆರೋಗ್ಯ ಸೇವೆಯ ಪ್ರಮುಖ ಅಂಗವಾಗಿದ್ದು ತುರ್ತುಪರಿಸ್ಥಿತಿಗಲ್ಲಿ ಜೀವ ಉಳಿಸಲು ನಿರ್ಣಾಯಕ ಪಾತ್ರ ವಹಿಸುತ್ತವೆ. ಹೃದ್ರೋಗ, ಸ್ಟ್ರೋಕ್ ಮುಂತಾದ ಸಂದರ್ಭಗಳಲ್ಲಿ ಗೋಲ್ಡನ್ ಅವರ್ ಎಂದು ಕರೆಯಲ್ಪಡುವ ಸಮಯ ನಿರ್ಣಾಯಕವಾಗಿದ್ದು ಅಂಬುಲೆನ್ಸ್ ಸೇವೆಯ ಜಾಲ ವಿಸ್ತರಿಸಿ ಗುಣಮಟ್ಟ ಹೆಚ್ಚಿಸಿ ಉತ್ತಮ ಚಿಕಿತ್ಸೆನೀಡಲಾಗಿವುದು ಎಂದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಬೀದಿ ಶ್ವಾನಗಳ ಹಾವಳಿ – ರೋಗಿಗಳಲ್ಲಿ ಆತಂಕ
Advertisement
2008ರಲ್ಲಿ ಅಂದಿನ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀರಾಮುಲು ಅವರ ಅವಧಿಯಲ್ಲಿ ಆರಂಭವಾದ ಆರೋಗ್ಯ ಕವಚ ಸೇವೆಗೆ ಆಧುನಿಕ ಸ್ಪರ್ಶ ನೀಡಲಾಗುವುದು. ಆಸ್ಪತ್ರೆಗಳ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನ ಅಳವಡಿಸಿಕೊಂಡರೆ ವ್ಯಕ್ತಿ ಕರೆ ಮಾಡಿದ 10-15 ನಿಮಿಷದಲ್ಲಿ ಅಂಬುಲೆನ್ಸ್ ತಲುಪಿ, ಸಮೀಪದ ಆಸ್ಪತ್ರೆಯನ್ನೂ ಗುರುತಿಸಬಹುದು. ಈಗ ನಗರ ಪ್ರದೇಶದಲ್ಲಿ 30-45 ನಿಮಿಷ ಹಾಗೂ ಗ್ರಾಮೀಣ ಭಾಗದಲ್ಲಿ 45 ನಿಮಿಷಕ್ಕಿಂತ ಹೆಚ್ಚು ಸಮಯ ಬೇಕಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವಾಗಿ ಸೇವೆ ದೊರಕುವಂತೆ ಸುಧಾರಣೆ ತರಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ನೂತನ ಟೆಂಡರ್ ಕರೆದಿದ್ದು, ಆದಷ್ಟು ಶೀಘ್ರದಲ್ಲಿ ಆರೋಗ್ಯ ಕವಚ ಸೇವೆಯನ್ನು ಇನ್ನಷ್ಟು ಸುಗಮಗೊಳಿಸಲಾಗುವುದು. ಪ್ರಸ್ತುತ 1 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಲಭ್ಯವಿದ್ದು, ಮುಂದಿನ ದಿನಗಳಲ್ಲಿ 40-50 ಸಾವಿರ ಜನಸಂಖ್ಯೆಗೆ ಒಂದು ಅಂಬುಲೆನ್ಸ್ ಲಭ್ಯತೆ ಕಲ್ಪಿಸಲಾಗುವುದು, ಅಂಬುಲೆನ್ಸ್ ಚಾಲಕರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿ, ಉತ್ಕೃಷ್ಟ ಸೇವೆ ನೆಧ್ವ ನಿಟ್ಟಿನಲ್ಲಿ ಅವರಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದರು. ಇದನ್ನೂ ಓದಿ: ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ: ಲಕ್ಷ್ಮಣ್ ಸವದಿ
5 ಕೋಟಿ ಲಸಿಕೆಯತ್ತ ರಾಜ್ಯ ದಾಪುಗಾಲು:
ರಾಜ್ಯದಲ್ಲಿ ದಿನಕ್ಕೆ ಸರಾಸರಿ 3.8 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತಿದ್ದು, ಇದು ಇಡೀ ರಷ್ಯಾ ದೇಶದಲ್ಲಿ ನೀಡುತ್ತಿರುವ ಲಸಿಕೆಗಿಂತ ಹೆಚ್ಚಾಗಿದೆ. ಕರ್ನಾಟಕ 5 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸುವತ್ತ ದಾಪುಗಾಲು ಇಡುತ್ತಿದ್ದು ಶೀಘ್ರವೇ ಈ ಮೈಲಿಗಲ್ಲು ತಲುಪಲಿದೆ ಎಂದರು.