ಜನಸಂಪರ್ಕ ಬೆಳೆಸಿಕೊಳ್ಳಿ – ಜಿ.ಪಂ. ಸಿಇಓಗಳಿಗೆ ಬೊಮ್ಮಾಯಿ ಸಲಹೆ

Public TV
3 Min Read
BASAVARJ BOMMAI 7

ಬೆಂಗಳೂರು: ಸಿಇಓಗಳು ಜನಸಂಪರ್ಕ ಹೊಂದಬೇಕು. ಹಳ್ಳಿಗರು ಸಮಸ್ಯೆಯ ಜೊತೆ ಜೀವನ ಮಾಡುತ್ತಾರೆ. ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದು ಬೇರೆ. ಸಮಸ್ಯೆಯ ಜೊತೆ ಬದುಕುವುದು ಬೇರೆ. ಅಧಿಕಾರಿಗಳು ತಳಮಟ್ಟಕ್ಕೆ ಹೋಗಿ ಸಮಸ್ಯೆಗಳ ಪರಿಹಾರದ ಬಗ್ಗೆ ಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

BASAVARJ BOMMAI MEETING

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ, ವಿವಿಧ ವಿಷಯಗಳ ಚರ್ಚೆ ನಡೆಸಿದ ನಂತರ ಮಾತನಾಡಿ, ಹಳ್ಳಿಗರು ಸಮಸ್ಯೆಯ ಜೊತೆ ಜೀವನ ಮಾಡುತ್ತಾರೆ. ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದು ಬೇರೆ. ಸಮಸ್ಯೆಯ ಜೊತೆ ಬದುಕುವುದು ಬೇರೆ. ಆದ್ದರಿಂದ ಅವರ ಸಮಸ್ಯೆ ಬಗೆಹರಿಸಲು ಶ್ರಮಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: 58 ನಗರ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆ – ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಕಮಾಲ್

ವಾರದಲ್ಲಿ ಮೂರು ದಿನ ಹಳ್ಳಿಗಳಿಗೆ ಭೇಟಿ ನೀಡಬೇಕು. ದಿಢೀರ್ ಭೇಟಿ ನೀಡಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ, ಮಾನವೀಯತೆಯಿಂದ ಪರಿಹಾರದ ಚಿಂತನೆ ಮಾಡಿ, ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇರಬೇಕು. ಗ್ರಾಮೀಣ ಜನರ ಬದುಕನ್ನುಹಸನು ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

BASAVARJ BOMMAI METTING

ಜಿಲ್ಲೆಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಅಭಿನಂದನೀಯ. ಜಲಜೀವನ ಮಿಷನ್, ವಸತಿ, ಶಾಲೆಗಳ ದುರಸ್ತಿ ಸೇರಿದಂತೆ ಇಂದು ನಿಗದಿಪಡಿಸಿರುವ ಗುರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಎನ್‍ಆರ್‍ಇಜಿ ಯೋಜನೆಯಡಿ ಕ್ರಿಯಾತ್ಮಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ. ಸರ್ಕಾರದ ಕಟ್ಟಡಗಳ ಆಸ್ತಿ ಸೃಜನೆಯ ಬಗ್ಗೆ ಗಮನ ನೀಡಬೇಕು ಎಂದು ನುಡಿದರು. ಇದನ್ನೂ ಓದಿ: ವಯಸ್ಕರಿಗಿಂತ 2 ರಿಂದ 18 ವರ್ಷದ ಮಕ್ಕಳಲ್ಲಿ ಕೋವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿ: ಭಾರತ್ ಬಯೋಟೆಕ್

ಸ್ತ್ರೀ ಶಕ್ತಿ ಮಾನವ ಸಂಪನ್ಮೂಲದ ದೊಡ್ಡ ಆಸ್ತಿ. ಎಸ್‍ಸಿ, ಎಸ್‍ಟಿ, ಓಬಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲರಾಗಿಸಬೇಕು. ಕರ್ನಾಟಕ ರಾಜ್ಯ ತಲಾವಾರು ಆದಾಯದಲ್ಲಿ 4ನೇ ಸ್ಥಾನದಲ್ಲಿದೆ. ತಲಾವಾರು ಆದಾಯಕ್ಕೆ ಕೇವಲ 30% ಜನ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಉಳಿದ ಶೇ.70ರಷ್ಟು ಜನ ದಿನನಿತ್ಯದ ಬದುಕಿಗೆ ದುಡಿಯುವುದಾಗಿದೆ. ಈ ವರ್ಗದವರಿಗೆ ಆರ್ಥಿಕ ನೆರವು, ತರಬೇತಿ ನೀಡಿದರೆ ಅವರ ಜೀವನ ಮಟ್ಟ ಸುಧಾರಿಸುತ್ತದೆ. ಕೃಷಿಯಲ್ಲಿ ಶೇ.1ರಷ್ಟು ಅಭಿವೃದ್ಧಿಯಾದರೆ, ಕೈಗಾರಿಕೆಗಳಲ್ಲಿ ಶೇ.4ರಷ್ಟು ಹಾಗೂ ಸೇವಾ ಕ್ಷೇತ್ರದಲ್ಲಿ ಶೇ.10ರಷ್ಟು ಅಭಿವೃದ್ಧಿಯಾಗುತ್ತದೆ ಎಂದರು.

ಸಿಇಓಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಕನಿಷ್ಟ ಶೇ.1 ರಷ್ಟಾದರೂ ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದರೆ, ಗ್ರಾಮೀಣ ಜನರ ಜೀವನದಲ್ಲಿ ಬದಲಾವಣೆ ತಂದಂತಾಗುತ್ತದೆ. ಜನರಿಗೆ ಇದರಿಂದ ವ್ಯವಸ್ಥೆಯ ಮೇಲೆ ವಿಶ್ವಾಸ ಮೂಡಿಸಲು ಸಾಧ್ಯ ಎಂದು ತಿಳಿಸಿದರು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

ಪ್ರಧಾನಿಯವರು ಮಧ್ಯವರ್ತಿಗಳ ಹಾವಳಿ ತಡೆಯಲು ಡಿಬಿಟಿ ವ್ಯವಸ್ಥೆ ಜಾರಿಗೆ ತಂದರು. ಅಂತೆಯೇ ರೈತರ ಸಂಕಷ್ಟವನ್ನು ಕಣ್ಣಾರೆ ಕಂಡು, ಅವರ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ರೈತ ವಿದ್ಯಾನಿಧಿ ಜಾರಿಗೆ ತರಲಾಗಿದೆ. ಹಿಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೈಕಲ್ ನೀಡಿದ್ದರಿಂದ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಹೆಚ್ಚಿನ ಸುಧಾರಣೆ ಆಗಿತ್ತು. ಆದ್ದರಿಂದ ಶಿಕ್ಷಣ, ಆರೋಗ್ಯ, ಉದ್ಯೋಗ ಸೃಜನೆಗೆ ಒತ್ತು ನೀಡಿ. ಶಿಶು ಮರಣ ಪ್ರಮಾಣ, ತಾಯಂದಿರ ಮರಣ ಪ್ರಮಾಣ ಹಾಗೂ ಅಪೌಷ್ಟಿಕತೆ ನಿವಾರಣೆಗೆ ಆದ್ಯತೆ ನೀಡಬೇಕು. ಬಡವರು, ತಳವರ್ಗದ ಜನರ ಜೀವನ ಮಟ್ಟ ಸುಧಾರಣೆಗೆ ಶಿಕ್ಷಣ, ಉದ್ಯೋಗ, ಸಬಲೀಕರಣದ ಮಂತ್ರವನ್ನು ಅನುಷ್ಠಾನಗೊಳಿಸಬೇಕು. ಇದರಿಂದ ಅವರು ಸ್ವಾಭಿಮಾನದ ಬದುಕು ನಡೆಸಲು ಸಾಧ್ಯ ಎಂದು ತಿಳಿಸಿದರು. ಅಂತೆಯೇ ಗ್ರಾಮ ಒನ್ ಯೋಜನೆಯಡಿ 30 ನಾಗರಿಕ ಸೇವೆಗಳನ್ನು ಪಂಚಾಯತ್ ಮಟ್ಟದಲ್ಲಿ ಒದಗಿಸಲಾಗುವುದು. ಅಂತೆಯೇ ಜನಸ್ಪಂದನದಡಿ ದಾಖಲಾದ ದೂರುಗಳ ನಿವಾರಣೆಗೆ, ಸಮಸ್ಯೆ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ದಿನಕ್ಕೆ 10 ತಾಸು ಕೆಲಸ ಮಾಡಿ, 3 ದಿನ ಹಳ್ಳಿಗಳಲ್ಲಿ ಪ್ರವಾಸ ಕೈಗೊಳ್ಳಿ ಎಂದು ಸಲಹೆ ನೀಡಿದರು. ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಗಮನ ಕೇಂದ್ರೀಕರಿಸಿ, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವು ಪಡೆದುಕೊಂಡು ಕಾರ್ಯನಿರ್ವಹಿಸಿ, ಜನರ ಸಮಸ್ಯೆ ಬಗೆಹರಿಸಿ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *