ಧಾರವಾಡ: ಕನ್ನಡದ ಜನಪ್ರಿಯ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಚೆನ್ನವೀರ ಕಣವಿ ಅವರು ಬೇಗ ಗುಣಮುಖರಾಗಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟ್ವೀಟ್ ಮಾಡುವ ಮೂಲಕ ಹಾರೈಸಿದ್ದಾರೆ.
Advertisement
ಸದ್ಯ ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು, ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ. ಚನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಿಸೆಸ್ ವರ್ಲ್ಡ್ 2022 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ನವ್ದೀಪ್ ಕೌರ್
Advertisement
ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|| ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ|| ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. pic.twitter.com/v2vVky003C
— Basavaraj S Bommai (@BSBommai) January 16, 2022
Advertisement
ಮತ್ತೊಂದೆಡೆ ಜಗದೀಶ್ ಶೆಟ್ಟರ್ ಅವರು, ಹಿರಿಯ ಕವಿಗಳಾದ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಧಾರವಾಡದ ಎಸ್.ಡಿ.ಎಮ್. ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದು ಸಮಾಧಾನಕರ. ಅವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
ಹಿರಿಯ ಕವಿಗಳಾದ ನಾಡೋಜ ಡಾ. ಚೆನ್ನವೀರ ಕಣವಿ ಅವರಿಗೆ ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಧಾರವಾಡದ ಎಸ್.ಡಿ.ಎಮ್. ಆಸ್ಪತ್ರೆಗೆ ಧಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದು ಸಮಾಧಾನಕರ. ಅವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. pic.twitter.com/gnSpJqzUSX
— Jagadish Shettar (@JagadishShettar) January 16, 2022
ಕವಿ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಜನವರಿ 14ರಂದು ಧಾರವಾಡದ ಎಸ್‍ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಚನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ನಿಗಾವಹಿಸಲು ಐಸಿಯುಗೆ ವರ್ಗಾಯಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮಗು ಪಡೆಯುವುದು ನಮ್ಮ ಜೀವನದ ಅತಿ ದೊಡ್ಡ ಕನಸು: ಪ್ರಿಯಾಂಕಾ ಚೋಪ್ರಾ