ಬೆಂಗಳೂರು: ಅಕಾಲಿಕ ಮಳೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳು ಅಷ್ಟಿಷ್ಟಲ್ಲ. ಈ ಮಳೆಯಿಂದ ರಾಜ್ಯದ ಜನರ ಜೀವನ ಅಸ್ತವ್ಯಸ್ತವಾಗಿದ್ದು, ಈ ಕುರಿತು ಚರ್ಚೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಭೆಯನ್ನು ಕರೆದಿದ್ದಾರೆ.
Advertisement
ಈ ಅಕಾಲಿಕ ಮಳೆಯಿಂದ ರಾಜಕಾಲುವೆ ಒತ್ತುವರಿ ಹೊಡೆತಕ್ಕೆ ಅಪಾರ್ಟ್‍ಮೆಂಟ್‍ಗಳು, ಮನೆ, ರಸ್ತೆಗಳಿಗೆ ನೀರು ನುಗ್ಗಿತ್ತು. ರಾಜಧಾನಿಯಲ್ಲಿ ಆಗಿರುವ ಮಳೆ ಅವಾಂತರ ಸಂಬಂಧ ಇವತ್ತು ಮಧ್ಯಾಹ್ನ 12 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
Advertisement
ಮಂಗಳವಾರ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‍ಮೆಂಟ್‍ಗೆ ಬೊಮ್ಮಾಯಿ ಅವರು ಭೇಟಿ ನೀಡಿದ್ದರು. ಈ ವೇಳೆ ರಾಜಕಾಲುವೆ ಒತ್ತುವರಿ ಮಾಡ್ಕೊಂಡು ಅಪಾರ್ಟ್‍ಮೆಂಟ್ ಕಟ್ಟಿರುವ ಬಗ್ಗೆ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಲಾಯಿತು. ಇದನ್ನೂ ಓದಿ: ಆರ್ ಆ್ಯಂಡ್ ಡಿ ಕಾರ್ಯಪಡೆಗೆ ಅಶೋಕ್ ಶೆಟ್ಟರ್ ನೇಮಕ
Advertisement
Advertisement
ಅದು ಅಲ್ಲದೇ ಇಂದು ಮಧ್ಯಾಹ್ನ ನಡೆಯಲಿರುವ ಸಭೆಯಲ್ಲಿ ಮಳೆಯಿಂದ ರಾಜಧಾನಿಯಲ್ಲಿ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ತಿ ಬಗ್ಗೆಯೂ ಅವರು ಚರ್ಚೆ ನಡೆಸಲಿದ್ದಾರೆ. ಕಂದಾಯ ಸಚಿವ ಆರ್ ಅಶೋಕ್, ಉಸ್ತುವಾರಿ ಸಚಿವ ಗೋಪಾಲಯ್ಯ ಇಂದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.