ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ರಾಜ್ಯದ ಇಬ್ಬರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಸಿಎಂ, ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಶ್ರೀ ಜಗ್ಗೇಶ್ ರವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್
Advertisement
ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಹಾಗೂ ಶ್ರೀ ಜಗ್ಗೇಶ್ ರವರಿಗೆ ಹಾರ್ದಿಕ ಅಭಿನಂದನೆಗಳು.@nsitharaman @Jaggesh2 @BJP4Karnataka pic.twitter.com/OnCrNDGzFv
— Basavaraj S Bommai (@BSBommai) May 29, 2022
Advertisement
ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮವಾದರೆ ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅಂತಿಮ ಹೆಸರು ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂವರು ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ನಾಲ್ಕನೇ ಸ್ಥಾನಕ್ಕೆ ಅಭ್ಯರ್ಥಿಯ ಯಾರು ಅನ್ನೋದು ಇನ್ನು ಕುತೂಹಲವಾಗಿಯೇ ಉಳಿದಿದೆ. ನಾಲ್ಕನೇ ಅಭ್ಯರ್ಥಿಗೆ ಕಾಂಗ್ರೆಸ್ ಅಥವಾ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದ್ರು ಜೆಡಿಎಸ್ ಬೆಂಬಲ ಬೇಕಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್‍ಗೆ ಟಿಕೆಟ್