ನಾನು ಸತ್ತರೆ ಇದೇ ಮಣ್ಣಿನಲ್ಲಿ ಹೂಳಬೇಕು – ಸಿಎಂ ಬೊಮ್ಮಾಯಿ ಭಾವುಕ

Public TV
2 Min Read
Basavaraj Bommai 9

ಹಾವೇರಿ: ಯಾವ ಜನ್ಮದ ಋಣವೋ ನನಗೆ ಗೊತ್ತಿಲ್ಲ, ನಾನು ಬಂದಾಗ ಪ್ರೀತಿ ವಿಶ್ವಾಸ ತೋರಿಸಿದ್ದೀರಿ. ನಾನು ಸತ್ತ ಮೇಲೆ ನನ್ನ ಅಂತ್ಯಕ್ರಿಯೆ ಇದೇ ಕ್ಷೇತ್ರದಲ್ಲಿ ಮಾಡಬೇಕು, ಇದೇ ಮಣ್ಣಿನಲ್ಲಿ ಹೂಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭಾವುಕ ನುಡಿಗಳನ್ನಾಡಿದರು.

Basavaraj Bommai 5 1

ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ (Shiggaavi) ಬಾಡ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ (Grama Vastavya) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಆಯುರ್ವೇದ ಕಾಲೇಜು, ಟೈಕ್ಸಟೈಲ್ ಪಾರ್ಕ್ (Textile Park) ನಿರ್ಮಾಣ ಮಾಡಲಾಗಿದೆ. ಮನೆ-ಮನೆಗೆ ಹೋಗಿ ಕಂದಾಯ ದಾಖಲೆಗಳನ್ನ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರ್.ಅಶೋಕ್ ಗ್ರಾಮದ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಒಂದು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ತ್ಯಾಗ – ರಾಮನಗರದಿಂದ ನಿಖಿಲ್‌ ಸ್ಪರ್ಧೆ

Basavaraj Bommai 4 1

ಇಷ್ಟು ದೊಡ್ಡ ಸಂಖ್ಯೆಯಲ್ಲಿ ತಾವೆಲ್ಲಾ ಸೇರಿದ್ದೀರಿ. ಎಲ್ಲಾ ಕಾರ್ಯಕ್ರಮಗಳ ಫಲಾನುಭವಿಗಳು ಇಂದು ಇಲ್ಲಿ ಬಂದಿದ್ದೀರಿ. ಎಲ್ಲಾ ಫಲಾನುಭವಿಗಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಾನು ಈ ಜಿಲ್ಲೆಗೆ ಹೋಗುತ್ತಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ (R Ashoka) ಅವರು ಹೇಳುತ್ತಿದ್ದರು. ಅದಕ್ಕೆ ನಮ್ಮ ಕ್ಷೇತ್ರಕ್ಕೆ ಬರುವುದಿಲ್ಲವೇನಪ್ಪಾ ಎಂದು ಕೇಳಿದೆ. ಉತ್ತರ ಕರ್ನಾಟಕದ (Uttar Karnataka) ನಮ್ಮ ಜನ ಹೃದಯ ಶ್ರೀಮಂತರು, ಅವರು ಬಹಳ ಪ್ರೀತಿ ತೋರಿಸುತ್ತಾರೆ. ಬನ್ನಿ ಎಂದು ಕರೆದೆ. ಇಂದು ಕಂದಾಯ ಸಚಿವರು ನಮ್ಮ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಹೊಗಳಿದರು.

Basavaraj Bommai 1 4

ಇಂದು 30 ಸಾವಿರ ಜನರಿಗೆ ಸರ್ಕಾರದ ಪರಿಹಾರದ ಹಣ, ಪ್ರಮಾಣ ಪತ್ರ ಕೊಡುತ್ತಿದ್ದೇವೆ. 6 ಸಾವಿರ ಮನೆಗಳಿಗೆ ಹಣ ಬಿಡುಗಡೆ ಮಾಡುತ್ತಿದ್ದೇವೆ. ಒಂದೇ ದಿನ 30 ಸಾವಿರ ಜನರಿಗೆ ಕೊಡುತ್ತಿದ್ದೇವೆ. ಕನಕದಾಸರ ಮಹಿಮೆ ಪ್ರಾರಂಭವಾಗಿದ್ದೇ ಈ ಬಾಡ ಗ್ರಾಮದಲ್ಲಿ. ಇದೊಂದು ಪರಿವರ್ತನೆಯ ಭೂಮಿ, ಪುಣ್ಯ ಭೂಮಿ ಇದು. ಇಲ್ಲಿಂದ ಶಿಗ್ಗಾಂವಿಯ (Shiggaavi) ಭವಿಷ್ಯ ಮತ್ತಷ್ಟು ಉಜ್ವಲವಾಗಲಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ನಾನು ಕನಸಿನಲ್ಲೂ ಯೋಚನೆ ಮಾಡಿರಲಿಲ್ಲ: ನಿಖಿಲ್‌ ಕುಮಾರಸ್ವಾಮಿ

Basavaraj Bommai 2 3

ನಾನು ದಿನನಿತ್ಯ ಎರಡ್ಮೂರು ಕ್ಷೇತ್ರಗಳಿಗೆ ಹೋಗುತ್ತಿರುತ್ತೇನೆ. ಅಲ್ಲಿ ಜನ ಬಹಳ ಪ್ರೀತಿಯಿಂದ ಸ್ವಾಗತ ಕೋರುತ್ತಾರೆ. ಆಗ ನನಗೆ ನೀವೇ ನೆನಪಾಗುತ್ತೀರಿ. ಈ ಸ್ಥಾನ, ಗೌರವ ನನಗೆ ಸೇರಬೇಕಾಗಿದ್ದಲ್ಲ, ಈ ಕ್ಷೇತ್ರದ ಜನರಾದ ನಿಮಗೆ ಸೇರಬೇಕು. ಬಂಧುಗಳೇ ನಾನು ನಿಮ್ಮ ಋಣದಲ್ಲಿದ್ದೇನೆ. ನನ್ನ ಜೀವನದ ಕೊನೆಯ ಉಸಿರಿರುವವರೆಗೆ ನಿಮ್ಮ ಸೇವೆ ಮಾಡುತ್ತೇನೆ. ಏನಪ್ಪಾ, ನಮ್ಮ ಸಾಹೇಬರು ದೂರ ಆಗಿಬಿಟ್ಟರು ಎಂದು ನಿಮಗೆ ಅನ್ನಿಸಿರಬಹುದು. ಆದರೆ ನನ್ನ ಹೃದಯ ಇಲ್ಲೇ ಇರುತ್ತದೆ ಎಂದು ಬೊಮ್ಮಾಯಿ ಅವರು ಭಾವುಕರಾದರು.

Basavaraj Bommai 3 1

ಡಿಸೆಂಬರ್ 31ರೊಳಗೆ ಮನೆ ಕಳೆದುಕೊಂಡ ಬಡವರಿಗೆ ನಾನೇ ಬಂದು ಧನಸಹಾಯ ಕೊಡುತ್ತೇನೆ. ಶಾಲೆಯ ಮಕ್ಕಳಿಗಾಗಿಯೇ ವಿಶೇಷ ಬಸ್ ಕೊಡುತ್ತೇವೆ. ನನ್ನ ಕ್ಷೇತ್ರದ ಪ್ರತಿ ಹಳ್ಳಿಯ ಹೊಲಗಳಿಗೆ ಹೋಗುವ ಎಲ್ಲಾ ರಸ್ತೆಗಳನ್ನು ನಿರ್ಮಿಸಲು ಆಜ್ಞೆ ಮಾಡುತ್ತೇನೆ. ನಮ್ಮ ಸರ್ಕಾರ ಒಂದೇ ವರ್ಷದಲ್ಲಿ 8 ಸಾವಿರ ಶಾಲೆಗಳನ್ನು ನಿರ್ಮಾಣ ಮಾಡುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ ನಿರ್ಮಾಣ ಮಾಡುತ್ತಿದೆ. ಶಿಗ್ಗಾಂವಿಯಲ್ಲಿ 250 ಬೆಡ್‌ಗಳ ಆಸ್ಪತ್ರೆ ನಿರ್ಮಿಸುತ್ತಿದ್ದೇವೆ. ಹಿಂದಿನ ಯಾವ ಸರ್ಕಾರಗಳೂ ಈ ಕೆಲಸ ಮಾಡಿಲ್ಲ ಎಂದು ತಮ್ಮ ಸರ್ಕಾರದ ಸಾಧನೆಯನ್ನು ಕೊಂಡಾಡಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *