ಬೆಂಗಳೂರು: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್(Mulayam Singh Yadav) ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಕ್ಷದ ವರಿಷ್ಠರು ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಮುಲಾಯಂ ಸಿಂಗ್ ಯಾದವ್ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ pic.twitter.com/3hTf5zMMMt
— Basavaraj S Bommai (@BSBommai) October 10, 2022
Advertisement
ರಾಮ್ ಮನೋಹರ್ ಲೋಹಿಯಾ, ರಾಜ್ ನಾರಾಯಣ್ ಅವರಂಥ ನಾಯಕರ ಮಾರ್ಗದರ್ಶನದಲ್ಲಿ ಮುನ್ನೆಲೆಗೆ ಬಂದ ಮುಲಾಯಂ ಸಿಂಗ್ ಅವರು ತುರ್ತು ಪರಿಸ್ಥಿತಿ ವಿರೋಧಿಸಿ ಸೆರೆವಾಸ ಅನುಭವಿಸಿದ್ದರು. ಸಮಾಜವಾದಿ ಪಕ್ಷವನ್ನು ಸ್ಥಾಪಿಸಿ, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಮುಲಾಯಂ ಸಿಂಗ್ ಅವರು ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ರಾಷ್ಟ್ರವು ಮುತ್ಸದ್ದಿ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಇದನ್ನೂ ಓದಿ: ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ
Advertisement
ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.