ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಅವಾಂತರಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹಿರಿಯ ಅಧಿಕಾರಿಗಳ ಜತೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಜಿಲ್ಲಾ ಪ್ರವಾಸದಲ್ಲಿ ಇರುವ ಸಿಎಂ ಸದ್ಯ ಹೊಸಪೇಟೆಯ ಕಮಲಾಪುರದಲ್ಲಿ ವಾಸ್ತವ್ಯ ಹೂಡಿದ್ದಾರೆ. ಕಮಲಾಪುರದ ಹೋಟೆಲ್‌ನಿಂದಲೇ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಕಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠರ ಜೊತೆಗೆ ವರ್ಚ್ಯುಯಲ್ ಸಭೆ ನಡೆಸಿದರು. ಸಚಿವರಾದ ಗೋವಿಂದ ಎಂ. ಕಾರಜೋಳ (Govind Karjol) ಹಾಗೂ ಶಶಿಕಲಾ ಜೊಲ್ಲೆ (Shashikala Jolle), ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಬಿಜೆಪಿಯವರಿಗೆ ನನ್ನ ಕಂಡರೆ ಭಯ; ಶತ್ರುಗಳಿದ್ದಷ್ಟು ನಾವು ಹೆಚ್ಚು ಬಲಶಾಲಿಗಳಾಗ್ತೀವಿ – ಸಿದ್ದು
Advertisement
Advertisement
ಬೆಳಗಾವಿ, ಧಾರವಾಡ, ದಾವಣಗೆರೆ, ಗದಗ, ಕಲ್ಬುರ್ಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬೀದರ್, ಮೈಸೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, ಜನ, ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಳೆ ಹಾನಿ ಕುರಿತು ಸಮಗ್ರ ಮಾಹಿತಿ ಪಡೆದ ಸಿಎಂ ತುರ್ತು ಪರಿಹಾರ ಕಾರ್ಯಾಚರಣೆಗೆ ಸೂಚಿಸಿದರು.
Advertisement
ಮನೆಗಳಿಗೆ ಸಂಬಂಧಿಸಿದ ಹಾನಿ ದಾಖಲಿಸುವಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಮನೆ ಹಾನಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚನೆ ನೀಡಿದರು. ಇದನ್ನೂ ಓದಿ: 1 ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್‍ಗಳ ಸಂಚಾರ: KSRTC ಅಧ್ಯಕ್ಷ ಎಂ.ಚಂದ್ರಪ್ಪ
Advertisement
ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆ ಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಬೇಕು. ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು- ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸಬೇಕು. ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು. ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಮಂಗಳೂರಿನ SDPI, PFI ನಾಯಕರ ಮನೆ ಮೇಲೆ ದಾಳಿ – ಐವರು ಅರೆಸ್ಟ್
ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮ್‌ಗಳನ್ನು 24 ಗಂಟೆಗಳೊಳಗೆ ಸರಿಪಡಿಸಿ, ವಿದ್ಯುತ್ ಸಂಪರ್ಕ ಒದಗಿಸಬೇಕು. ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಳೆ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಶೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು. ಬೆಳೆ ಹಾನಿ ಹಾಗೂ ಮನೆ ಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಸೂಚಿಸಿದರು.