ಬೆಳಗಾವಿ: ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ನಾಳೆ, ನಾಡಿದ್ದು ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Advertisement
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ವಾರದಲ್ಲಿ ಇಡೀ ದೇಶದಲ್ಲಿ ಕೊರೊನಾ ಕೇಸ್ ಹೆಚ್ಚಳವಾಗಿದೆ. ಅದೇ ರೀತಿ ಓಮಿಕ್ರಾನ್ ಕೇಸ್ ಕೂಡ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದರಿಂದ ಬೆಳಗಾವಿ ಸೇರಿ ಅಕ್ಕಪಕ್ಕದ ಚೆಕ್ ಪೋಸ್ಟ್‌ಗಳನ್ನು ಬೀಗಿ ಮಾಡಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಸುಮಾರು 11 ಚೆಕ್ ಪೋಸ್ಟ್ ಮಾಡಲಾಗಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಆಗಬೇಕು. ಇದರಿಂದ ಕೆಲವು ಪ್ರಯಾಣಿಕರಿಗೆ ಸ್ವಲ್ಪ ತೊಂದರೆ ಆಗಬಹುದು. ರಾಜ್ಯದ ಹಾಗೂ ಬೆಳಗಾವಿ ಜಿಲ್ಲೆಯ ಜನರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದರು. ಇದನ್ನೂ ಓದಿ: ಕೊರೊನಾ 3ನೇ ಅಲೆ ಭೀತಿ – ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಶಾಲಾ, ಕಾಲೇಜ್ ಬಂದ್
Advertisement
Advertisement
ಕೊರೊನಾಕ್ಕೆ ನಿರ್ಬಂಧ ಅಷ್ಟೇ ಅಲ್ಲದೇ ತಯಾರಿಯನ್ನು ಸಹ ಮಾಡಿದ್ದಾರೆ. ಆಕ್ಸಿಜನ್ ಕೊರತೆ ನಿಗಿಸಲು ಕ್ರಮ ವಹಿಸಲಾಗಿದೆ. ಐಸಿಯು, ಬೆಡ್ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಇಡೀ ರಾಜ್ಯದಲ್ಲಿ 4 ಸಾವಿರಕ್ಕೂ ಹೆಚ್ಚು ಐಸಿಯು ಬೆಡ್‍ಗಳನ್ನು ಮಾಡಲು ಈಗಾಗಲೇ ಕ್ರಮ ಕೈಗೊಂಡಿದ್ದೇವೆ. ಔಷಧಿ ಸಿದ್ಧವಾಗಿ ಇಟ್ಟುಕೊಳ್ಳಲು ಸೂಚನೆ ನೀಡಲಾಗಿದೆ. ನಾಳೆಯಿಂದ ಮಕ್ಕಳಿಗೆ ವ್ಯಾಕ್ಸಿನ್ ನೀಡಲು ಪ್ರಧಾನಿ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯ ಮಟ್ಟದಲ್ಲಿಯೂ ಶಿಸ್ತುಬದ್ಧವಾಗಿ ವ್ಯಾಕ್ಸಿನ್ ನೀಡಲು ಸಿದ್ಧತೆ ಮಾಡಲಾಗಿದೆ. ನೈಟ್ ಕರ್ಫ್ಯೂ ಮುಂದುವರಿಕೆ ಬಗ್ಗೆ ಬೆಳವಣಿಗೆ ನೋಡಿಕೊಂಡು ನಾಳೆ, ನಾಡಿದ್ದು ತೀರ್ಮಾನ ಮಾಡುತ್ತೇವೆ. ಇದನ್ನೂ ಓದಿ: ಓಮಿಕ್ರಾನ್ ಸ್ಫೋಟ – ಬೆಂಗಳೂರಿನಲ್ಲಿ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಆರ್.ಅಶೋಕ್
Advertisement
ಲಾಕ್‍ಡೌನ್ ಬಗ್ಗೆ ಸಚಿವ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನಮ್ಮ ನಿಲುವು ಬಹಳ ಸ್ಪಷ್ಟವಾಗಿ ಇದೆ. ಹಿಂದೆಲ್ಲ ಲಾಕ್‍ಡೌನ್ ಆಗಿತ್ತು, ಮತ್ತೆ ಹಾಗೆ ಆಗಬಾರದು ಎಂದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಜನ ಸಹಕಾರ ಕೊಡಬೇಕು ಎನ್ನುವ ನಿಟ್ಟಿನಲ್ಲಿ ಆರ್.ಅಶೋಕ್ ಹೇಳಿದ್ದಾರೆ ಎಂದರು.