ಬೆಂಗಳೂರು: ಆದಿಚುಂಚನಗಿರಿ ಮಠ (Adichunchanagiri Mutt) ತನ್ನದೇ ಇತಿಹಾಸ ಹೊಂದಿದ್ದು, ಭವ್ಯ ಕರ್ನಾಟಕ ನಿರ್ಮಾಣ ಮಾಡಲು ದೊಡ್ಡ ಸಾಧನೆ ಆದಿಚುಂಚನಗಿರಿ ಮಠದಿಂದ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿಶ್ವಾಸ ವ್ಯಕ್ತಪಡಿಸಿದರು.
ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji) ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭ, ಬಿಜಿಎಸ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ (BGS National Public School) ಜ್ಯೋತಿರ್ದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಮೋದಿ-ಅದಾನಿಯ ಪ್ರೀತಿ ಷಹಜಹಾನ್ – ಮಮ್ತಾಝ್‌ನಂತೆ, ಇದನ್ನ ಜನಕ್ಕೆ ತಿಳಿಸಬೇಕು – ನಲಪಾಡ್
Advertisement
Advertisement
ನಿರ್ಮಲಾನಂದನಾಥ ಸ್ವಾಮೀಜಿಗಳ ಪಟ್ಟಾಭಿಷೇಕವಾಗಿ ಒಂದು ದಶಕ ಕಳೆದಿದ್ದು, ಇದು ಆತ್ಮಾವಲೋಕನ ಹಾಗೂ ಸಿಂಹಾವಲೋಕನ ಮಾಡಿಕೊಳ್ಳುವ ಘಟ್ಟ. ಕಳೆದ 10 ವರ್ಷಗಳಲ್ಲಿ ಸ್ವಾಮೀಜಿಗಳು ಅಪಾರ ಸಾಧನೆ ಮಾಡಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿಗಳು ಬಿತ್ತಿದ ಬೀಜ ಹೆಮ್ಮರವಾಗಿ ಬೆಳೆದಿದೆ. ನಿರ್ಮಲಾನಂದನಾಥ ಸ್ವಾಮೀಜಿಗಳ ಕಾಲದಲ್ಲಿ ಸಂಸ್ಥೆ ಬೆಳೆಯುತ್ತಿದೆ. ಪ್ರಕಾಶನಾಥ ಸ್ವಾಮೀಜಿ ಕೂಡ ಬೆಂಗಳೂರಿನ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದಾರೆ. ಕಷ್ಟಪಟ್ಟು ನಿರ್ಮಾಣವಾಗಿರುವ ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಗುಣಮಟ್ಟ ಕಾಯ್ದುಕೊಂಡು ಬೆಳೆಸಿರುವುದು ಸಂಸದ ಸಂಗತಿ ಎಂದು ಶ್ಲಾಘಿಸಿದರು.
Advertisement
Advertisement
ವೈಜ್ಞಾನಿಕ ಮನೋಧರ್ಮ: ನಿರ್ಮಲಾನಂದನಾಥ ಸ್ವಾಮೀಜಿ ಅವರು ಅಪರೂಪದ ಸ್ವಾಮೀಜಿಗಳು. ವಿಜ್ಞಾನ ಮತ್ತು ತತ್ವಜ್ಞಾನ ಒಂದೇ ನಾಣ್ಯದ ಎರಡು ಮುಖಗಳು. ಅವೆರಡನ್ನೂ ಆಳವಾಗಿ ಅಧ್ಯಯನ ಮಾಡಿ ಸಮಾಜಕ್ಕೆ ನೀಡುವ ದೊಡ್ಡ ಸಾಧನೆ ಅವರದ್ದು ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ನೇಮಕ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ: ಅಶ್ವಥ್ ನಾರಾಯಣ್
ಬಿಜಿಎಸ್ ಬ್ರಾಂಡ್: 1.50 ಲಕ್ಷ ಮಕ್ಕಳು ಬಿಜಿಎಸ್ ಸಂಸ್ಥೆಗಳಲ್ಲಿ ಕಲಿಯುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ, ಆಸ್ಪತ್ರೆಯಿಂದ ಪಬ್ಲಿಕ್ ಶಾಲೆಯವರೆಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕದಾದ್ಯಂತ ಸಂಸ್ಥೆಯ ಸೇವೆಗಳು ಲಭ್ಯವಾಗಬೇಕೆ ಎನ್ನುವುದು ಸ್ವಾಮೀಜಿಗಳ ಇಚ್ಛೆ. ಉತ್ತರ ಕರ್ನಾಟಕದಲ್ಲಿ ಈ ಸಂಸ್ಥೆಗಳನ್ನು ತೆರೆದು ಅಭಿವೃದ್ಧಿ ಮಾಡುತ್ತಿದ್ದಾರೆ. ಕಿಡ್ನಿ, ಲಿವರ್ ಕಸಿ ಮಾಡಿಸುವವರಿಗೂ ಬಿಜಿಎಸ್ ಆಸ್ಪತ್ರೆಯಲ್ಲಿ ಸಾಕಷ್ಟು ಸೌಲಭ್ಯವಿದೆ ಎಂದರು.
ಸಾಧನೆಗೆ ಮಠಗಳೇ ಕಾರಣ: ಗ್ರಾಮೀಣ ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಮೂಡಿಸುವಲ್ಲಿ ಆದಿ ಚುಂಚನಗಿರಿ ಮಠ ಪ್ರಮುಖ ಪಾತ್ರವಹಿಸಿದೆ. ಸರ್ಕಾರ ಮಾಡುವ ಕೆಲಸವನ್ನು ಕರ್ನಾಟಕದ ಅನೇಕ ಮಠಗಳು ಮಾಡಿಕೊಂಡು ಬಂದಿವೆ. ಕರ್ನಾಟಕದಲ್ಲಿ ಶಿಕ್ಷಣ ಪ್ರಮಾಣ ಹೆಚ್ಚಾಗಲು, ಶೈಕ್ಷಣಿಕವಾಗಿ ಸಾಧನೆ ಮಾಡಲು ಮಠಗಳೇ ಕಾರಣ. ನಾವು ಆತ್ಮಾವಲೋಕನ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಭವಿಷ್ಯದ ಚಿಂತನೆಯೂ ಮಾಡಬೇಕು ಎಂದು ಸಲಹೆ ನೀಡಿದರು.
ಮಾರ್ಗದರ್ಶನ ಅಗತ್ಯ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ನೀಡಿ ಅವನನ್ನು ಸ್ವಾವಲಂಬಿಯನ್ನಾಗಿಸಲು ನಿರ್ಮಲಾನಂದನಾಥ ಸ್ವಾಮೀಜಿ ಅವರ ಮಾರ್ಗದರ್ಶನ ಹಾಗೂ ಆಶೀರ್ವಾದ ಅಗತ್ಯ. ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಇದು ದೊರೆಯಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಡಾ.ಕೆ ಸುಧಾಕರ್, ಶಾಸಕ ಸತೀಶ್ ರೆಡ್ಡಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ, ಸಾಹಿತಿ ದೊಡ್ಡರಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಉಪಸ್ಥಿತರಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k