ಬೆಂಗಳೂರು: ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು ಮೊದಲನೇ ಪ್ರಾಶಸ್ತ್ಯ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿರುವ ʼವಿಜ್ಞಾನ ಮೇಳ-2023ʼ ಉದ್ಘಾಟಿಸಿ ಮಾತನಾಡಿದ ಅವರು, ವಸತಿ ಶಿಕ್ಷಣ ಸಂಸ್ಥೆಗೆ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತೇವೆ. ನಾವು ಕಟ್ಟಡ, ಕಾಂಪೌಂಡ್, ಗೋಡೆಗಳಿಗೆ ಬಹಳ ಖರ್ಚು ಮಾಡುತ್ತಿದ್ದೇವೆ. ಈಗಾಗಲೇ ಸಚಿವ ಸಂಪುಟ ಸಭೆಗಳಲ್ಲಿ ಹೇಳಿರುವಂತೆ ಮಕ್ಕಳಿಗೆ ಮಾಡಬೇಕಿರುವ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ನೀಡಬೇಕು. ಮಾಡಲೇಬೇಕಾದ ಬದಲಾವಣೆಗಳನ್ನು ತನ್ನಿ. ನಂತರ ಉಳಿದ ವಿಷಯಗಳಿಗೆ ಗಮನ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಯಡ್ಡಿಯೂರಪ್ಪಗೆ ಕಲ್ಲು ಹೊಡೆದ್ರೆ BJP ಪಕ್ಷಕ್ಕೇ ಪೆಟ್ಟು – ವಿಜಯೇಂದ್ರ ಎಚ್ಚರಿಕೆ
Advertisement
Advertisement
ಒಂದು ಶಾಲೆಗೆ 30 ಕೋಟಿ ರೂ. ವೆಚ್ಚವಾಗುತ್ತದೆ. ಆದರೆ 30 ಕೋಟಿ ರೂ. ಖರ್ಚು ಮಾಡಿದರೂ, ಮಕ್ಕಳಿಗೆ ಯಾವ ವ್ಯವಸ್ಥೆಯಾಗಬೇಕೋ ಅದು ಆಗುತ್ತಿಲ್ಲ. ಇದು ಹಿಂದಿನ ಸರ್ಕಾರಗಳಿಂದ ಬಂದಿರುವ ಬಳುವಳಿ ಇದು. ಗುತ್ತಿಗೆದಾರ ಆಧರಿತ ಗುತ್ತಿಗೆ ನೀಡುವುದರಿಂದ ಪರಿಸ್ಥಿತಿ ಹೀಗಾಗಿದೆ. ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಸಚಿವರಿದ್ದಾಗ ವಿಶೇಷ ಅನುದಾನವನ್ನು ಮಕ್ಕಳಿಗೆ ಡೆಸ್ಕ್, ಮಲಗುವ ಸ್ಥಳ, ಪುಸ್ತಕ ಸೇರಿದಂತೆ ಉಳಿದ ವಿಚಾರಗಳಿಗೆ ಹೆಚ್ಚಿನ ಗಮನ ನೀಡಲು ಕಳೆದ ಮೂರು ವರ್ಷಗಳಿಂದ ಪ್ರಾರಂಭಿಸಿದ್ದೇವೆ. ಸಾಕಷ್ಟು ಸುಧಾರಣೆಯೂ ಆಗಿದೆ ಎಂದರು.
Advertisement
ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಜ್ಞಾನ ಮೇಳ ಆಯೋಜಿಸಿರುವುದು ಸಂತೋಷದ ಸಂಗತಿ. ಈ ವಸತಿ ಶಾಲೆಗಳು ಪ್ರಾರಂಭವಾಗಿರುವುದೇ ಎಸ್‌ಸಿ/ಎಸ್‌ಟಿ, ಹಿಂದುಳಿದ ವರ್ಗಗಳ ಮಕ್ಕಳಿಗೆ ಉನ್ನತ ಶಿಕ್ಷಣ, ಗುಣಾತ್ಮಕ ಶಿಕ್ಷಣ, ಎಲ್ಲಾ ವ್ಯವಸ್ಥೆಗಳಿರುವ ವಸತಿ ಶಾಲೆಗಳನ್ನು ನೀಡಬೇಕೆನ್ನುವ ಉದ್ದೇಶದಿಂದ. ಸಾವಿರಕ್ಕೂ ಹೆಚ್ಚು ಶಾಲೆಗಳು ಇಲ್ಲಿ ಭಾಗವಹಿಸಿವೆ. ಈ ಶಾಲೆಗಳ ಮೌಲ್ಯಮಾಪನ ಮಾಡಿದಾಗ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಗುಣಮಟ್ಟವನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬೇರೆಯವರಿಗಿಂತ ಉತ್ತಮ ಅಂಕಗಳನ್ನು ಪಡೆಯುತ್ತಿದ್ದಾರೆ. ಮಕ್ಕಳಲ್ಲಿ ಕೀಳರಿಮೆ ಹೋಗಿ ಆತ್ಮವಿಶ್ವಾಸ ಜಾಗೃತವಾಗಿವೆ. ಹೀಗಾಗಿ ಈ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸಬೇಕಾಗಿದೆ. ಇನ್ನಷ್ಟು ಗುಣಾತ್ಮಕ ಶಿಕ್ಷಣ, ವ್ಯಕ್ತಿತ್ವ ವಿಕಸನವಾಗಬೇಕಿದೆ. ವಿಫುಲವಾದ ಅವಕಾಶಗಳನ್ನು ಈ ಮಕ್ಕಳಿಗೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜೆಡಿಎಸ್ ಬಿಟ್ಟು ಕಾಂಗ್ರೆಸ್‍ಗೆ ಬರೋಕೆ ಅವರೇನೋ ರೆಡಿ – ಕರೆಯೋಕೆ ಕೈ ನಾಯಕರೇ ಸಿದ್ಧರಿಲ್ಲ!
Advertisement
ಒಂದು ಸಾವಿರ ಶಾಲೆಗಳಿರುವ ದೊಡ್ಡ ವ್ಯವಸ್ಥೆಯಾಗಿದ್ದು, ಪೋಷಕರು ಇಲ್ಲಿಗೆ ಕಳುಹಿಸಿದ್ದಾರೆ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಅದು ನಮ್ಮ ಕರ್ತವ್ಯ. ಅವರಿಗೆ ಉತ್ತಮ, ಗುಣಾತ್ಮಕ ಶಿಕ್ಷಣ ನೀಡಿ, ಅವರಿಗೆ ಒಳ್ಳೆಯ ಭವಿಷ್ಯ ನಿರ್ಮಿಸುವ ಕೆಲಸವಾದಾಗ ಸಮಾಜದಲ್ಲಿ ಪರಿವರ್ತನೆಯಾಗುತ್ತದೆ. ಇದು ನಿಜಕ್ಕೂ ಆಗಬೇಕಿರುವ ಕೆಲಸ. ಯಾವ ಶಾಲೆಗಳಲ್ಲಿ ಏನು ಕೊರತೆ, ಎಷ್ಟು ಅನುದಾನ ಇದೆ ಎಂದು ಪಟ್ಟಿ ನೀಡಿದರೆ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದರು.
ಎಲ್ಲಾ ಅಧಿಕಾರಿಗಳು ಶಾಲೆಗಳಿಗೆ ಭೇಟಿ ಮಾಡಲು ಸೂಚಿಸಿದರಲ್ಲದೇ ಹತ್ತು ವರ್ಷಗಳಾಗಿರುವ ಶಾಲೆಗಳಲ್ಲಿ, ಎಲ್ಲಾ ವ್ಯವಸ್ಥೆಗಳಿರುವ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಕಡ್ಡಾಯವಾಗಿ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸೂಚಿಸಿದರು.
ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮಕ್ಕಳ ನಡುವೆಯೇ ನಡೆಸುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು, ಇಲ್ಲಿ ಮಕ್ಕಳಿಗೆ ಸಮಾನ ಅವಕಾಶ ನೀಡಲಾಗಿದೆ. ಯಾವ ಶಾಲೆಗಳಲ್ಲಿ ಏನು ಕೊರತೆಯಿದೆ, ಏನನ್ನು ಸರಿಪಡಿಸಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು ಹೇಗೆ ತಯಾರು ಮಾಡಬೇಕೆನ್ನುವ ಸಲುವಾಗಿ ಸ್ಪರ್ಧೆ, ಪರೀಕ್ಷೆಗಳನ್ನು ನೀಡಿ ಸಾಮರ್ಥ್ಯ ಬೆಳೆಸಿ ಎಂದರು. ಇದನ್ನೂ ಓದಿ: ಕೋಲಾರದ ಆಂತರಿಕ ಸಮೀಕ್ಷಾ ವರದಿ ನೋಡಿ ಸಿದ್ದರಾಮಯ್ಯ ಶಾಕ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k