Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ಯಾನ್ಸರ್‌ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ಯಾನ್ಸರ್‌ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಬೊಮ್ಮಾಯಿ

Bengaluru City

ಕ್ಯಾನ್ಸರ್‌ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಬೊಮ್ಮಾಯಿ

Public TV
Last updated: August 23, 2021 10:28 pm
Public TV
Share
2 Min Read
CM Basavaraj Bommai inaugurates new OPD block at Kidwai built by Infosys Foundation 3 e1629737422856
SHARE

ಬೆಂಗಳೂರು: ಕ್ಯಾನ್ಸರ್ ಪೀಡಿತರಿಗೆ ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ದರದಲ್ಲಿ ಚಿಕಿತ್ಸೆ ಕೊಡುವ ವ್ಯವಸ್ಥೆ ಕಲ್ಪಿಸಲು ಸೊಸೈಟಿಯನ್ನು ಸ್ಥಾಪನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಿದ್ವಾಯಿ ಸ್ಮಾರಕ ಸಂಸ್ಥೆ, ಕ್ಯಾನ್ಸರ್ ಸಂಶೋಧನಾ ಮತ್ತು ತರಬೇತಿ ಕೇಂದ್ರದಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿರುವ ಒಪಿಡಿ ಬ್ಲಾಕ್ ಹಾಗೂ ಇತರೆ ಸೌಲಭ್ಯಗಳ ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು.

CM Basavaraj Bommai inaugurates new OPD block at Kidwai built by Infosys Foundation 4

ಸಿ.ಎಸ್.ಆರ್ ಹಾಗೂ ಸರ್ಕಾರದ ನಿಧಿಯನ್ನು ಬಳಸಿ ಸೊಸೈಟಿಯ ಮೂಲಕ ರೋಗಿಗಳ ಆರೈಕೆಯಲ್ಲಿರುವ ಅವರ ಕುಟುಂಬದವರಿಗೆ ಅಗತ್ಯವಿರುವ ಅನುಕೂಲವನ್ನು ಸಹ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಆವಿಷ್ಕಾರಗಳ ಬಳಕೆಗೆ ಒತ್ತು ನೀಡಲಾಗುವುದು ಎಂದ ಅವರು ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಕಿದ್ವಾಯಿ ಸಂಸ್ಥೆ, ಜಗತ್ತಿನ ಎಲ್ಲ ಉತ್ತಮ ವೈದ್ಯಕೀಯ ಸಂಸ್ಥೆಗಳೊಂದಿಗೆ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಇನ್ಫೋಸಿಸ್ ಪ್ರತಿಷ್ಠಾನ ರಾಜ್ಯದ ಅನೇಕ ಆಸ್ಪತ್ರೆಗಳಿಗೆ ಹಾಗೂ ಶಾಲಾ, ಕಾಲೇಜುಗಳಿಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ ಎಂಬ ಸರ್ವಜ್ಞನ ಮಾತನ್ನು ಪ್ರತಿಷ್ಠಾನದ ವತಿಯಿಂದ ಅಕ್ಷರಶ: ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರು ಪಾಲಿಸಿಕೊಂಡು ಬಂದಿದ್ದಾರೆ ಎಂದು ಶ್ಲಾಘಿಸಿದರು.

CM Basavaraj Bommai inaugurates new OPD block at Kidwai built by Infosys Foundation 2

ಕ್ಯಾನ್ಸರ್ ಜೊತೆ ಹೋರಾಟ ಮಾಡುವಾಗ ಮಾನವೀಯತೆಯನ್ನು ಉಳಿಸಿಕೊಳ್ಳಬೇಕು. ಬಡ ರೋಗಿಗಳಿಗೆ ಸಹಾಯಕ್ಕೆ ಇನ್ನಷ್ಟು ದಾನಿಗಳು ಮುಂದೆ ಬರಬೇಕು ಎಂದರು.

ನಾಡಿಗೆ ಹೃದಯವಿರುವ ಶ್ರೀಮಂತರ ಅಗತ್ಯವಿದೆ. ಒಬ್ಬರಿಗೊಬ್ಬರ ಪ್ರೇರಣೆಯಿಂದ ಜಗತ್ತು ನಡೆಯುತ್ತಿದೆ. ಒಳ್ಳೆಯ ಕೆಲಸ ಮಾಡಿದಾಗ ಮರೆಯದೆ ಮೆಲುಕು ಹಾಕಬೇಕು. ಈ ಬಗ್ಗೆ ಚಿಂತನೆ ಮಾಡಿದಾಗ ಶಕ್ತಿ ತುಂಬಿ ಇನ್ನಷ್ಟು ದೊಡ್ಡ ಕೆಲಸ ಮಾಡಲು ಪ್ರೇರಣೆ ದೊರೆಯುತ್ತದೆ ಎಂದರು. ಇದನ್ನೂ ಓದಿ: ಯುವ ಬ್ಯಾಡ್ಮಿಂಟನ್ ಪ್ರತಿಭೆಗಳ ತರಬೇತಿಗೆ ಇನ್ಫೋಸಿಸ್ 16 ಕೋಟಿ ರೂ. ನೆರವು

CM Basavaraj Bommai inaugurates new OPD block at Kidwai built by Infosys Foundation 1

ತಮ್ಮ ತಾಯಿಗೆ ಕ್ಯಾನ್ಸರ್ ಪೀಡಿತರಾಗಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಮುಖ್ಯಮಂತ್ರಿಗಳು, ಕ್ಯಾನ್ಸರ್ ಚಿಕಿತ್ಸೆಯೇ ಸಮಸ್ಯೆ ಎನ್ನುವಂಥ ಕಾಲವಿತ್ತು. ಸಂಶೋಧನೆಯ ಫಲವಾಗಿ ಚಿಕಿತ್ಸೆಯಲ್ಲಿ ಈಗ ಸಾಕಷ್ಟು ಸುಧಾರಣೆಯಾಗಿದೆ. ಕಾಯಿಲೆಗೆ ಒಳಗಾದವರು ಮಾನಸಿಕ ಒತ್ತಡ ಬಹಳವಿರುತ್ತದೆ. ಕಿದ್ವಾಯಿ ಸಂಸ್ಥೆ ಕಳೆದ ನಾಲ್ಕು ದಶಕಗಳಿಂದ ಅಸ್ತಿತ್ವದಲ್ಲಿದ್ದು, ಇಲ್ಲಿ ಮಾಡುವ ಪ್ರತಿಯೊಬ್ಬರೂ ಶ್ರದ್ಧೆಯಿಂದ ಕೆಲಸ ಮಾಡಿದ್ದು, ಅವರೆಲ್ಲರ ಸೇವೆ ಅಮೋಘವಾಗಿದೆ ಎಂದು ಶ್ಲಾಘಿಸಿದರಲ್ಲದೆ ಇಂಥ ಸೇವೆ ಮಾಡುವ ಸಂಸ್ಥೆಗೆ ನಮ್ಮ ಸರ್ಕಾರದ ಬೆಂಬಲ ಸದಾ ಇರುತ್ತದೆ ಎಂದರು. ಇದನ್ನೂ ಓದಿ: ಇನ್ಫೋಸಿಸ್ ಫೌಂಡೇಶನ್‍ನಿಂದ ರಾಯರ ಮಠಕ್ಕೆ ಒಂದು ಲಾರಿ ಆಹಾರ ಪದಾರ್ಥ

ಕಲಬುರಗಿ, ಶಿವಮೊಗ್ಗ, ಮೈಸೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಿದ್ದು, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಕ್ಯಾನ್ಸರ್ ಆಸ್ಪತ್ರೆ ತೆರೆಯಲು ಹಾಗೂ ಪ್ರಾದೇಶಿಕವಾರು ಕ್ಯಾನ್ಸರ್ ಆಸ್ಪತ್ರೆಗಳನ್ನು ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆರೋಗ್ಯ ಸಚಿವ ಡಾ. ಸುಧಾಕರ್, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ. ಸಿ.ರಾಮಚಂದ್ರ ಹಾಗೂ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

TAGGED:Basavaraj Bommaibengaluruinfosyskannada newsKidwai Hospitalopdಇನ್ಫೋಸಿಸ್ಕಿದ್ವಾಯಿಕ್ಯಾನ್ಸರ್ಬಸವರಾಜ ಬೊಮ್ಮಾಯಿಸುಧಾಮೂರ್ತಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Lamborghini Revuelto Crashed
Latest

ಕುಡಿದ ಮತ್ತಿನಲ್ಲಿ ಲ್ಯಾಂಬೋರ್ಗಿನಿ ಚಲಾಯಿಸಿ ಜನರು, ವಾಹನಗಳಿಗೆ ಗುದ್ದಿದ ತಂಬಾಕು ಉದ್ಯಮಿ ಪುತ್ರ

Public TV
By Public TV
2 hours ago
girl hand mobile
Bengaluru City

ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ – ಪುತ್ರಿಯ ಫೋನ್‌ ನೋಡಿ ಶಾಕ್‌

Public TV
By Public TV
2 hours ago
g.parameshwara 2
Bengaluru City

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಪರಮೇಶ್ವರ್

Public TV
By Public TV
2 hours ago
Nelamangala Gold Chain Snatch Woman Death
Bengaluru City

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು

Public TV
By Public TV
3 hours ago
Uttar Pradesh Meerut PUBG Death
Crime

ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು

Public TV
By Public TV
3 hours ago
Namma Metro fare hike Empty trunk protest Bengaluru South MP Tejasvi Surya detained
Bengaluru City

ಮೆಟ್ರೋ ಜಟಾಪಟಿ| ʻಕಾಂಗ್ರೆಸ್‌ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರʼ ಟ್ರಂಕ್‌ ಹಿಡ್ಕೊಂಡು ಬಂದ ತೇಜಸ್ವಿ ಸೂರ್ಯ ವಶಕ್ಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?