ಹುಬ್ಬಳ್ಳಿ: ರಾಜ್ಯ ಸರ್ಕಾರ ಭಾರತದಲ್ಲೇ ಮೊದಲ ಬಾರಿಗೆ ಏಕಕಾಲದಲ್ಲಿ 114 ‘ನಮ್ಮ ಕ್ಲಿನಿಕ್’ಗೆ (Namma Clinic) ಚಾಲನೆ ನೀಡುವ ಮೂಲಕ ಮೈಲಿಗಲ್ಲು ಸೃಷ್ಟಿಸಿದೆ. ನಗರ ಪ್ರದೇಶಗಳಲ್ಲಿ ಸ್ಥಾಪನೆ ಮಾಡಲು ತೀರ್ಮಾನ ಮಾಡಿದ್ದ ರಾಜ್ಯ ಸರ್ಕಾರ ಅದರಂತೆ ಇಂದು ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಬೈರಿದೇವರಕೊಪ್ಪದಲ್ಲಿ ಮೊಟ್ಟ ಮೊದಲ ನಮ್ಮ ಕ್ಲಿನಿಕ್‌ಗೆ ಚಾಲನೆ ನೀಡಿತು.
ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅಧಿಕೃತವಾಗಿ ಚಾಲನೆ ನೀಡಿದ್ದು, ಸಿಎಂಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸೇರಿ ಹಲವು ಸಚಿವರ ನೇತೃತ್ವದಲ್ಲಿ ಅದ್ದೂರಿ ಉದ್ಘಾಟನೆಯಾಯಿತು. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ನಮ್ಮ ಕ್ಲಿನಿಕ್ ಅನುಷ್ಠಾನಕ್ಕೆ ತರಲಾಗಿದೆ.
Advertisement
Advertisement
ನಗರ ಪ್ರದೇಶದ ಕಡು ಬಡವರಿಗೆ, ನಿರ್ಗತಿಕರಿಗೆ, ಕೊಳಚೆ, ಸ್ಲಂ ನಿವಾಸಿಗಳಿಗೆ ಮತ್ತು ಗ್ರಾಮೀಣ ಭಾಗದಿಂದ ನಗರಕ್ಕೆ ಕೂಲಿ ಕೆಲಸಕ್ಕೆ ಬರುವ ಜನರಿಗೆ, ಸ್ಥಳೀಯವಾಗಿ ಮತ್ತು ಶೀಘ್ರವಾಗಿ ಪ್ರಾಥಮಿಕ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳನ್ನು ಆರಂಭಿಸಲಾಗಿದೆ. 150 ಕೋಟಿ ರೂ. ವೆಚ್ಚದಲ್ಲಿ 438 ಕ್ಲಿನಿಕ್ ತೆರಯಲಾಗುತ್ತದೆ. ಮೊದಲ ಹಂತದಲ್ಲಿ ಒಟ್ಟು 114 ಕ್ಲಿನಿಕ್ ಗಳಿಗೆ ಚಾಲನೆ ನೀಡಿದ್ದು, ಜನವರಿ ಅಂತ್ಯದ ಹೊತ್ತಿಗೆ ಉಳಿದ 438 ಆಸ್ಪತ್ರೆಗಳನ್ನು ಉದ್ಘಾಟನೆ ಮಾಡುವುದಾಗಿ ಆರೋಗ್ಯ ಇಲಾಖೆ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
Advertisement
Advertisement
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸ್ಥಾಪಿಸಿರುವ, ಪ್ರತಿ ನಮ್ಮ ಕ್ಲಿನಿಕ್ 1,000 ಚದರ ಅಡಿ ವಿಸ್ತೀರ್ಣ ಹೊಂದಿದ್ದು ಇಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ ಕೊಠಡಿ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಆಡಳಿತ ಕಛೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿದ್ದು ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪುತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಝಿಕಾ ವೈರಸ್‌ಗೆ ಹೆಚ್ಚಿದ ಆತಂಕ – ಮಕ್ಕಳ ಸಣ್ಣ ಜ್ವರಕ್ಕೂ ಹೆದರುತ್ತಿದ್ದಾರೆ ಪೋಷಕರು
ಪ್ರಸ್ತುತ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಪ್ರತಿ ಎಸ್‌ಕೆಎಂ ಜನಸಂಖ್ಯೆಗೆ ಒಂದರಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಕಾರ್ಯನಿರ್ವಹಿಸುತ್ತಿದೆ. ಹೆಚ್ಚುವರಿಯಾಗಿ 8ನೇ ಹಣಕಾಸು ಆಯೋಗದ ಅನುದಾನದಡಿ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರತಿ 1,000-20,000 ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್ ನಗರ ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ನಮ್ಮ ಕ್ಲಿನಿಕ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದ ಪ್ರಯೋಗಶಾಲಾ ತಜ್ಞರು, ಕಿರಿಯ ದರ್ಜೆ ಸಹಾಯಕರು ಮತ್ತು ಡಿ-ದರ್ಜೆ ನೌಕರಾಗಿರುತ್ತಾರೆ.
ಸೇವೆಗಳೇನು?
* ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ಆರೈಕೆ.
* ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು, ಸಾರ್ವತ್ರಿಕ ಲಸಿಕಾಕರಣ ಸೇವೆಗಳು.
* ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಸಂತಾನೋತ್ಪತ್ತಿ, ಆರೋಗ್ಯ ಸೇವೆಗಳು. ಇದನ್ನೂ ಓದಿ: ಭಾರತ – ಚೀನಾ ಸಂಘರ್ಷ: ಸದನದಿಂದ ಹೊರನಡೆದ ಸೋನಿಯಾ ಗಾಂಧಿ