600 ಕೋಟಿ ವೆಚ್ಚದ ರಾಜೀವ್ ಗಾಂಧಿ ಆರೋಗ್ಯ ವಿವಿ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ

Basavaraj Bommai 4

– ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಮರುಜೀವ

ರಾಮನಗರ: ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ (Rajiv Gandhi University of Health Sciences) ನಿರ್ಮಾಣ ಕಾಮಗಾರಿಗೆ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ (Basavaraj Bommai) ನೆರವೇರಿಸಿದ್ದಾರೆ.

ಸುಮಾರು 600 ಕೋಟಿ ರೂ. ವೆಚ್ಚದಲ್ಲಿ 270 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಗುದ್ದಲಿಪೂಜೆ ನೇರವೇರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಅತ್ಯಾಚಾರ ಅಪರಾಧಿ!

Basavaraj Bommai 2 2

ಹಿಂದೆ ನಾಲ್ಕೈದು ಬಾರಿ ಗುದ್ದಲಿಪೂಜೆ ನಡೆದರೂ ಕಾರಣಾಂತರಗಳಿಂದ ಯೋಜನೆ ನೆನೆಗುದಿಗೆ ಬಿದ್ದಿತ್ತು. ಇದೀಗ ಆಡಳಿತಾತ್ಮಕ ಅನುಮೋದನೆ ಪಡೆದಿರುವ ಬೊಮ್ಮಾಯಿ ಆರೋಗ್ಯ ವಿವಿ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದಾರೆ. ಇದೇ ವೇಳೆ ‌ಹಲವು ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್

670 ಕೋಟಿ ರೂ. ವೆಚ್ಚದ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆ, ಜಲಜೀವನ್ ಮಿಷನ್ ಅಡಿ ಶುದ್ಧಕುಡಿಯುವ ನೀರಿನ ಯೋಜನೆ, 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ, 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಹಾಗೂ 5.23 ಕೋಟಿ ರೂ. ವೆಚ್ಚದಲ್ಲಿ ಕೆಎಸ್ಐಸಿ ಮಾರಾಟ ಮಳಿಗೆಯ ಉನ್ನತೀಕರಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ ನೀಡಿದ್ದಾರೆ.

Basavaraj Bommai 1 2

ಸಚಿವರಾದ ಅಶ್ವಥ್ ನಾರಾಯಣ್ (Ashwath Narayan), ಡಾ.ಕೆ ಸುಧಾಕರ್ (K Sudhakar), ಕೆ.ಸಿ ನಾರಾಯಣಗೌಡ ಸೇರಿ ಹಲವು ಮುಖಂಡರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ಥಳೀಯ ಶಾಸಕಿ ಅನಿತಾ ಕುಮಾರಸ್ವಾಮಿ ಕೇವಲ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವೇದಿಕೆ ಕಾರ್ಯಕ್ರಮಕ್ಕೆ ಗೈರಾದರು. ಸಂಸದ ಡಿ.ಕೆ ಸುರೇಶ್ ಕೂಡಾ ಕಾರ್ಯಕ್ರಮಕ್ಕೆ ಗೈರಾಗಿದ್ದರು.