ಲಸಿಕೆ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ಸರಾಸರಿ ತಲುಪಬೇಕು: ಸಿಎಂ ಸೂಚನೆ

Public TV
2 Min Read
cm meeting

ಬೆಂಗಳೂರು: ಮೊದಲನೇ ಹಾಗೂ 2 ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ಸರಾಸರಿಯನ್ನು ತಲುಪಬೇಕು ಎಂದು ಎಲ್ಲ ಜಿಲ್ಲೆಗಳ ಡಿಸಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಕೋವಿಡ್-19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಬೊಮ್ಮಾಯಿ ಮಾತನಾಡಿದರು. ಜಿಲ್ಲಾಡಳಿತಗಳು ದಕ್ಷತೆಯಿಂದ ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧ ಕಿಟ್‌ಗಳನ್ನು ತಲುಪಿಸಬೇಕು. ಹೋಮ್ ಐಸೋಲೇಶನ್ ನಲ್ಲಿರುವವರಿಗೆ ಸರಿಯಾದ ಚಿಕಿತ್ಸೆ ನೀಡಬೇಕು. ಜಿಲ್ಲಾಧಿಕಾರಿಗಳು, ಡಿಹೆಚ್‌ಒಗಳು ತಾಲ್ಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲಿಸಬೇಕು. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: 12-14 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ನಿರ್ಧಾರವಾಗಿಲ್ಲ – ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ

BASAVARJ BOMMAI 7

ಪ್ರಯೋಗಾಲಯದ ವರದಿ ಬಂದ ತಕ್ಷಣ ಟೆಲಿ ಟ್ರಯಾಜಿಂಗ್ ಮಾಡಬೇಕು. ಶೇ.94ರಷ್ಟು ಸೋಂಕಿತರು ಹೋಮ್ ಐಸೋಲೇಶನ್ ಇರುವುದರಿಂದ ಮನೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಸೋಂಕಿತರ ಮನೆಯವರಿಗೂ ಪರೀಕ್ಷೆ ಮಾಡಿ ಅಗತ್ಯವಿದ್ದರೆ ಚಿಕಿತ್ಸೆ ನೀಡಿ ಎಂದು ಸಲಹೆ ನೀಡಿದರು.

ಹೊರ ರಾಜ್ಯ ಕಾರ್ಮಿಕರಿಗಾಗಿ ಲಸಿಕೆ, ಚಿಕಿತ್ಸೆ ಎಸ್‌ಒಪಿ:
ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಪ್ರಾರಂಭ ಮಾಡಿ ವೈದ್ಯರು ಹಾಗೂ ಎಎನ್‌ಎಂಗಳು ಮನೆ ಮನೆಗೆ ಭೇಟಿ ನೀಡಬೇಕು. ಇದಕ್ಕೆ ವಿಶೇಷ ಎಸ್‌ಒಪಿ ರೂಪಿಸಬೇಕು. ಬೆಂಗಳೂರಿನಲ್ಲಿ ಖಾಸಗಿ ಹಾಗೂ ಸರ್ಕಾರಿ ಒಪಿಡಿಗಳನ್ನು ಬಲಪಡಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಹೊಸ ಒಪಿಡಿಗಳನ್ನು ತೆರೆಯಬೇಕು. ಕೆಲಸಕ್ಕಾಗಿ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ರಾಜ್ಯದ ಕೈಗಾರಿಕೆಗಳಿಗೆ ಕಾರ್ಮಿಕರ ಲಸಿಕೆ ಹಾಗೂ ಚಿಕಿತ್ಸೆ ಕುರಿತು ವಿಶೇಷ ಎಸ್‌ಒಪಿ ರೂಪಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ನಾನು ಮಾಸ್ಕ್ ಹಾಕಲ್ಲ : ಸಚಿವ ಉಮೇಶ್ ಕತ್ತಿ

CORONA VACCINATION

ಅನ್ಯರೋಗಿಗಳು, ವೃದ್ಧರ ಪರೀಕ್ಷೆ ಹೆಚ್ಚಿಸಿ:
ಎಲ್ಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವುದರಿಂದ ಅನ್ಯರೋಗ (ಕೋ-ಮಾರ್ಬಿಡಿಟಿ) ಇರುವವರನ್ನು ಗುರುತಿಸಿ, ಹೋಮ್ ಐಸೋಲೇಶನ್‌ನಲ್ಲಿರುವವರಿಗೆ ಟೆಸ್ಟ್ ಮಾಡಿ ಚಿಕಿತ್ಸೆ ನೀಡಬೇಕು. ಕೋ-ಮಾರ್ಬಿಡಿಟಿ ಇರುವವರು ಹಾಗೂ 60 ವರ್ಷಗಳಿಗೂ ಮೇಲ್ಪಟ್ಟವರಿಗೆ ಪರೀಕ್ಷೆಗಳನ್ನು ಹೆಚ್ಚಿಸಬೇಕು ಮತ್ತು ಔಷಧಿ ಒದಗಿಸಬೇಕು ಎಂದು ತಿಳಿಸಿದರು.

ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚು ಒತ್ತು ನೀಡಬೇಕು. ಮುಂಚೂಣಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಅಭಿಯಾನ ಕೈಗೊಳ್ಳಬೇಕು. ಲಸಿಕೆ ಪಡೆದು 90 ದಿನ ಪೂರೈಸಿರುವವರ ಪಟ್ಟಿ ತಯಾರಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಲಸಿಕೆ ಕಾರ್ಯಕ್ರಮದ ಮೇಲ್ವಿಚಾರಣೆಯ ಜವಾಬ್ದಾರಿ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಹುಟ್ಟಿದ ಒಂದು ದಿನದ ನವಜಾತ ಶಿಶುವಿಗೆ ಕೊರೊನಾ

ckb ration covid test large

ಕರ್ನಾಟಕದಲ್ಲಿ ಪರೀಕ್ಷೆಗಳು ಹೆಚ್ಚಾಗಿರುವುದರಿಂದ ಪ್ರಕರಣಗಳು ಹೆಚ್ಚಿದ್ದರೂ ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳು ಉತ್ತಮವಾಗಿದ್ದರೆ ಕೋವಿಡ್ ಮೂರನೇ ಅಲೆ ಏರುಗತಿ ತಲುಪಿದರೂ ಆತಂಕ ಪಡದೆ ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಸಿಎಂ ಆಶಯ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *