ಬೆಳಗಾವಿ: ನಗರದ ಅನಗೋಳದಲ್ಲಿರುವ ಬೆಮ್ಕೊ ಹೈಡ್ರಾಲಿಕ್ಸ್‌ನಿಂದ 4ನೇ ರೈಲ್ವೇ ಗೇಟ್ ವರೆಗಿನ ರಸ್ತೆಯನ್ನು ʼಬಸವರಾಜ ಬೊಮ್ಮಾಯಿ ರಸ್ತೆʼ (Basavaraj Bommai Road) ಎಂದು ನಾಮಕರಣ ಮಾಡಲಾಗಿದೆ.
Advertisement
ನಗರದ ಕೆ.ಎಲ್.ಇ. ಸಂಸ್ಥೆಯ ಡಾ.ಶೇಷಗಿರಿ ಎಂಜಿನಿಯರಿಂಗ್ ಕಾಲೇಜ್ ಎದುರಿನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಬಸವರಾಜ್ ಅವರು, ‘ಬಸವರಾಜ ಬೊಮ್ಮಾಯಿ’ ರಸ್ತೆ ಫಲಕವನ್ನು ಅನಾವರಣಗೊಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ (Smart City Project) ಅಭಿವೃದ್ಧಿಪಡಿಸಲಾಗಿರುವ ರಸ್ತೆಗೆ ನಾಮಕರಣ ಮಾಡುವುದರ ಜೊತೆಗೆ ಅಲಂಕೃತ ವಿದ್ಯುದ್ದೀಪಗಳಿಗೂ ಸಚಿವರು ಚಾಲನೆ ನೀಡಿದರು. ಇದನ್ನೂ ಓದಿ: ಸ್ಪೆಷಲ್ ಮಾಸ್ಕ್ ರಿಲೀಸ್ – ಬಾರ್, ಪಬ್‌ಗಳಲ್ಲಿ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡ್ಬೋದು: ಆರ್.ಅಶೋಕ್
Advertisement
Advertisement
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ್ ಪಾಟೀಲ್ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿವರಿಸಿದರು. ಮಹಾನಗರ ಪಾಲಿಕೆ ಸದಸ್ಯ ಶ್ರೀಶೈಲ ಕಾಂಬಳೆ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ್ ಬಾಗೇವಾಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಹೂಡಿಕೆಗೆ ಅಮೆರಿಕದ ರಾಕ್ ಸ್ಪೇಸ್ ಕಂಪನಿ ಆಸಕ್ತಿ – ಸಚಿವರರೊಂದಿಗೆ ಮಾತುಕತೆ