Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಸೂಚನೆ

Bengaluru City

ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಸೂಚನೆ

Public TV
Last updated: June 3, 2022 6:37 pm
Public TV
Share
2 Min Read
BASAVARAJ BOMMAI 6
SHARE

ಬೆಂಗಳೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಮೂರು ವರ್ಷಗಳ ಬದಲಾಗಿ ಎರಡು ವರ್ಷಗಳಲ್ಲಿಯೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

BASAVARAJ BOMMAI

ಅವರು ಇಂದು ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಗಳನ್ನು ಅನುಮೋದಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಒಟ್ಟು 3885 ಕೋಟಿ ರೂ. ಅಂದಾಜು ವೆಚ್ಚದ ಈ ಯೋಜನೆಯನ್ನು 2024ರಲ್ಲಿಯೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

BASAVARAJ BOMMAI 5

ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಐದು ವರ್ಷಗಳಲ್ಲಿ ರಾಜ್ಯದ ಪಾಲೂ ಸೇರಿದಂತೆ ಒಟ್ಟು 9260 ಕೋಟಿ ರೂ. ವೆಚ್ಚದಲ್ಲಿ 287 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೆ ರೂಪಿಸಲಾಗುತ್ತಿದೆ. ಈ ಯೋಜನೆಯಡಿ, ತಾಂತ್ರಿಕವಾಗಿ ಕಾರ್ಯ ಸಾಧ್ಯವಾಗಿರುವ ನಗರ ಸ್ಥಳೀಯ ಸಂಸ್ಥೆಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿ ಕಾಮಗಾರಿ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ನಗರ ಪ್ರದೇಶದ ಬಡಜನರಿಗೆ ಉತ್ತಮ ಸೌಲಭ್ಯ ಒದಗಿಸಲು ಸೂಚಿಸಿದ ಮುಖ್ಯಮಂತ್ರಿಗಳು, ನಗರ ಪ್ರದೇಶದ ಸರಳ ನಿಯಮಗಳೊಂದಿಗೆ ವಸತಿ ಯೋಜನೆ ರೂಪಿಸಲು ಸೂಚಿಸಿದರು.

BASAVARAJ BOMMAI 3

ಬಿಬಿಎಂಪಿ ವ್ಯಾಪ್ತಿಯಲ್ಲಿ 6000 ಪೌರ ಕಾರ್ಮಿಕರ ನೇಮಕಕ್ಕೆ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ನೇಮಕಾತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಹಾಗೂ ರೋಸ್ಟರ್ ವಿನಾಯಿತಿ ನೀಡಲು ಕ್ರಮ ವಹಿಸುವಂತೆ ತಿಳಿಸಿದರು. ಪೌರ ಕಾರ್ಮಿಕರಿಗೆ 2000 ರೂ. ಹಾರ್ಡ್‍ಷಿಪ್ ಭತ್ಯೆ ನೀಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಇದನ್ನೂ ಓದಿ: 23ನೇ ಓವರ್‌ನಲ್ಲಿ ಪಂದ್ಯ ಸ್ಥಗಿತ – ಲಾರ್ಡ್ಸ್ ಟೆಸ್ಟ್‌ನಲ್ಲಿ ವಾರ್ನ್‍ಗೆ ವಿಶೇಷ ಗೌರವ

BASAVARAJ BOMMAI 2

ರಾಜ್ಯದ ಎಲ್ಲ ವಿಭಾಗಗಳಲ್ಲಿ ಎಲ್ಲ ಸೌಕರ್ಯಗಳನ್ನೂ ಒಳಗೊಂಡ Iಟಿಣegಡಿಚಿಣeಜ ಣoತಿಟಿshiಠಿ ಅನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸುವ ಯೋಜನೆ ಅನುಷ್ಠಾನಕ್ಕೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಎಲ್ಲ ವಿಭಾಗಗಳಿಂದ ಸ್ವೀಕರಿಸಲಾದ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಯೋಜನೆಗೆ ಕೂಡಲೇ ಸಲಹೆಗಾರರನ್ನು ನೇಮಕ ಮಾಡಿಕೊಳ್ಳಬೇಕು. ಈ ಯೋಜನೆಗೆ ಸಂಬಂಧ ಪಟ್ಟ ಎಲ್ಲ ಇಲಾಖೆಗಳ ಅಭಿಪ್ರಾಯ ಪಡೆದು ಟೌನ್‍ಷಿಪ್ ನ ರೂಪುರೇಷೆಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

Basavaraj Bommai 1 1

ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅಜಯ್ ನಾಗಭೂಷಣ್, ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಆಯುಕ್ತ ಕೆ.ಪಿ. ಮೋಹನ್ ರಾಜ್, ಪೌರಾಡಳಿತ ಇಲಾಖೆ ನಿರ್ದೇಶಕರಾದ ಎಂ.ಎಸ್. ಅರ್ಚನಾ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Basavaraj Bommaibbmpbengaluruಬಸವರಾಜ ಬೊಮ್ಮಾಯಿಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
5 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
6 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
6 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
6 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
7 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?