Bengaluru CityDakshina KannadaDistrictsKarnatakaLatestLeading NewsMain Post

ಪ್ರವೀಣ್ ಪತ್ನಿಗೆ ಗ್ರೂಪ್ ಸಿ ಹುದ್ದೆ- ಸರ್ಕಾರ ಆದೇಶ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ (BJP) ಮುಖಂಡ ಪ್ರವೀಣ್ ನೆಟ್ಟಾರು (Praveen Kumar Nettar) ಪತ್ನಿಗೆ ಸಿಎಂ ಸಚಿವಾಲಯದಲ್ಲಿ ಗ್ರೂಪ್ ಸಿ ಹುದ್ದೆ ನೀಡಲು ಸಿಎಂ ಕಚೇರಿ ಆದೇಶ ಹೊರಡಿಸಿದೆ.

ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು. ಆ ಪ್ರಕಾರವಾಗಿಯೇ ಇಂದು ಪ್ರವೀಣ್ ನೆಟ್ಟಾರು ಪತ್ನಿ ನೂತನಾಗೆ ಸರ್ಕಾರಿ ನೌಕರಿಯನ್ನು ನೀಡಿದ್ದಾರೆ.

ಪ್ರವೀಣ್ ಪತ್ನಿಗೆ ಗ್ರೂಪ್ ಸಿ ಹುದ್ದೆ- ಸರ್ಕಾರ ಆದೇಶ

ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಹೆಚ್.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್

ಪ್ರವೀಣ್ ಪತ್ನಿಗೆ ಗ್ರೂಪ್ ಸಿ ಹುದ್ದೆ- ಸರ್ಕಾರ ಆದೇಶ

ಪ್ರವೀಣ್ ನೆಟ್ಟಾರು ಹತ್ಯೆಯಿಂದ ದಕ್ಷಿಣ ಕನ್ನಡದಲ್ಲೂ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕ್ಷೋಭೆ ಭುಗಿಲೆದ್ದಿತ್ತು, ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪಕ್ಷ ಹಾಗೂ ಸರ್ಕಾರವು ಮುಜುಗರ ಅನುಭವಿಸಬೇಕಾದ ಪರಿಸ್ಥಿತಿಯೂ ಉಂಟಾಗಿತ್ತು. ಇದನ್ನೂ ಓದಿ: ಅಭಿವೃದ್ಧಿಗೆ ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ ಅವಶ್ಯಕ : ಪ್ರಹ್ಲಾದ್ ಜೋಶಿ

Live Tv

Leave a Reply

Your email address will not be published. Required fields are marked *

Back to top button