ಬಳ್ಳಾರಿ: ಇದೊಂದು ಉಗ್ರರ ಕೃತ್ಯ ಅಂತ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಇದೊಂದು ವ್ಯವಸ್ಥಿತ ಜಾಲ, ಆ ಜಾಲವನ್ನು ಪತ್ತೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.

ಶನಿವಾರ ಸಂಜೆ 5 ಗಂಟೆಯ ವೇಳೆ ಮಂಗಳೂರಿನ ಪಂಪ್‍ವೆಲ್‍ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋ ನಿಗೂಢ ಸ್ಫೋಟಗೊಂಡಿದೆ. ದಾರಿ ಮಧ್ಯೆ ಸವಾರನೋರ್ವ ಕೈಯಲ್ಲಿ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ್ದು ನಾಗುರಿಗೆ ಹೋಗಲು ಚಾಲಕನಿಗೆ ಸೂಚಿಸಿದ್ದ. ಆದರೆ ಕೆಲವೇ ಕ್ಷಣಗಳಲ್ಲಿ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆಯ ಎದುರು ಆಟೋದ ಒಳಗೆ ಸ್ಫೋಟಗೊಂಡಿದ್ದು ಸವಾರನ ಕೈಯಲ್ಲಿದ್ದ ಕುಕ್ಕರ್ ಛಿದ್ರಗೊಂಡಿತ್ತು. ಇದನ್ನೂ ಓದಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಅನಿರೀಕ್ಷಿತವಾಗಿ ಸ್ಪೋಟಗೊಂಡಿಲ್ಲ, ಇದೊಂದು ಉಗ್ರ ಕೃತ್ಯ: ಪ್ರವೀಣ್ ಸೂದ್
ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎನ್ನಲಾಗುತ್ತಿದ್ದು, ಈ ವಿಚಾರ ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಸದ್ಯ ಈ ಸ್ಫೋಟವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದೆ.


