ಶಿವಮೊಗ್ಗ: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದಾಗಿ ಹಾಗೂ ಕಾನೂನು ವಿರೋಧಿ ಮತ್ತು ಸಮಾಜಘಾತಕ ಶಕ್ತಿಗಳನ್ನು ಸದೆಬಡಿಯುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಹಿಂದೆ ಯಾರಿದ್ದಾರೆ ಎಂದು ತನಿಖೆ ಮೂಲಕ ಪತ್ತೆ ಮಾಡಲಾಗುವುದು. ಗಲಭೆಗೆ ಸಂಬಂಧಿಸಿದಂತೆ ಅನೇಕ ವೀಡಿಯೋ ದೃಶ್ಯಗಳಿದ್ದು, ಅದರ ಮೂಲಕ ನೂರಾರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಅಂಗಡಿ ದೋಚಿದ ಖುಷಿಯಲ್ಲಿ ಡ್ಯಾನ್ಸ್ ಮಾಡಿದ ಕಳ್ಳ – ವೀಡಿಯೋ ವೈರಲ್
Advertisement
Advertisement
ಈ ಹಿಂದೆ ಡಿ.ಜೆ.ಹಳ್ಳಿ ಹಾಗೂ ಕೆ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ವೇಳೆ ಕಲ್ಲು ತೂರಾಟ ನಡೆಸಿದ ಹಾಗೂ ಸಾರ್ವಜನಿಕ ಆಸ್ತಿ ಹಾಳು ಮಾಡಿದ ಕಿಡಿಗೇಡಿಗಳಿಂದಲೇ ನಷ್ಟವನ್ನು ರಿಕವರಿ ಮಾಡಲು ತನಿಖಾ ಸಮಿತಿ ಆದೇಶಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗಿದೆ. ಇಂತಹ ಗಲಭೆ ಪ್ರಕರಣಗಳು ರಾಜ್ಯಕ್ಕೆ ಪಾಠವಾಗಿದೆ. ಇದನ್ನು ಇಟ್ಟುಕೊಂಡು ಹುಬ್ಬಳ್ಳಿ ಪ್ರಕರಣ ಸೇರಿದಂತೆ ಇತರೆ ಪ್ರಕರಣಗಳನ್ನು ನೋಡಲಾಗುವುದು ಎಂದು ತಿಳಿಸಿದರು.
Advertisement
ಯುಪಿ ಮಾದರಿ ಆಡಳಿತ ಜಾರಿಗೆ ತರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಯಾ ರಾಜ್ಯದ ಪರಿಸ್ಥಿತಿಗೆ ತಕ್ಕಂತೆ ಅವರು ಕ್ರಮ ಕೈಗೊಂಡಿದ್ದಾರೆ. ನಾವು ಇಲ್ಲಿ ಪರಿಸ್ಥಿತಿ ಹಾಗೂ ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ. ಗಲಭೆಗೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಹೇಳಿದರು.
Advertisement
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಇದನ್ನು ಹಿಂದುಳಿದ ವರ್ಗಗಳ ಆಯೋಗ ನೋಡಿಕೊಳ್ಳುತ್ತದೆ. ಅವರು ನೀಡಿದ ವರದಿ ಆಧರಿಸಿ ಸರ್ಕಾರ ಕ್ರಮಕೈಗೊಳ್ಳುವುದು ಎಂದರು. ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಶಾಸಕ ಎಸ್.ರುದ್ರೇಗೌಡರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಹಾಜರಿದ್ದರು. ಇದನ್ನೂ ಓದಿ: ಬಂಡೀಪುರದಲ್ಲಿ ಅವಳಿ ಮರಿಗಳಿಗೆ ಜನ್ಮ ಕೊಟ್ಟ ಕಾಡಾನೆ