ಬೆಳಗಾವಿ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಯಾವಾಗ ಚರ್ಚೆಗೆ ಕರೆಯುತ್ತೋ ಅಂದು ಹೋಗಿ ಈ ಕುರಿತು ಚರ್ಚೆ ಮಾಡಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟರು.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ನಾಳೆಗೆ ದೆಹಲಿಗೆ ಹೋಗುತ್ತಿದ್ದೇನೆ. ಚೀಫ್ ಜಸ್ಟಿಸ್ ಕಾನ್ಫರೆನ್ಸ್ ಪಾಲ್ಗೊಂಡು ವಾಪಸ್ ಬರುತ್ತೇನೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಯಾವಾಗ ಚರ್ಚೆಗೆ ಕರೆಯುತ್ತೋ ಅಂದು ಹೋಗಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ಇದನ್ನೂ ಓದಿ: ಕ್ಯಾನ್ಸರ್ ಚಿಕಿತ್ಸೆಯಲ್ಲಿರುವಾಗಲೇ ಇಂಟರ್ವ್ಯೂ ಅಟೆಂಡ್ ಮಾಡಿದ ಹಠವಾದಿ
Advertisement
Advertisement
ಬೆಳಗಾವಿ ಜಿಲ್ಲೆ ವಿಭಜನೆ ವಿಚಾರಕ್ಕೆ, ಬೆಳಗಾವಿ ಜಿಲ್ಲೆಯ ವಿಭಜನೆಗೆ ಇನ್ನೂ ಯಾವುದೇ ನಿರ್ಣಯ ಮಾಡಿಲ್ಲ. ಬೆಳಗಾವಿ ವಿಭಜನೆ ಅನೇಕ ವರ್ಷಗಳಿಂದ ಚರ್ಚೆಯಲ್ಲಿದೆ. ಎರಡು, ಮೂರು ಜಿಲ್ಲೆಗಳ ಬಗ್ಗೆ ಪ್ರಸ್ತಾಪವಿದೆ. ಗಡಿಭಾಗದ ಜಿಲ್ಲೆ ಇದ್ದು ಬೇಡ ಎಂದು ಅಂದಿನಿ ಸಿಎಂ ಜೆ.ಎಚ್.ಪಟೇಲ್ ಇದ್ದಾಗ ಹೇಳಿದ್ರು. ಈಗ ಮತ್ತೆ ಜನರ ತಮ್ಮ ಒತ್ತಾಸೆಯನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕ, ಜಿಲ್ಲೆ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದರು.
Advertisement
ರಾಜ್ಯದಲ್ಲಿ ಮತ್ತೆ ಸಾರಿಗೆ ಮುಷ್ಕರ ವಿಚಾರಕ್ಕೆ, ಇದನ್ನು ಸಾರಿಗೆ ಸಚಿವರು ನೋಡಿಕೊಳ್ಳುತ್ತಾರೆ ಎಂದು ಪ್ರತಿಕ್ರಿಯೆ ನೀಡಿದರು. ಇದೇ ವೇಳೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ಇಡೋ ವಿಚಾರಕ್ಕೆ ಮಾತನಾಡಿದ ಅವರು, ಇಲ್ಲಿಯ ಎಲ್ಲ ನಾಯಕರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಇದನ್ನೂ ಓದಿ: ಅವನನ್ನ ಪ್ಲೀಸ್ ಬಿಡಬೇಡಿ, ಅವನಿಗೆ ಶಿಕ್ಷೆಯಾಗಲೇ ಬೇಕು: ಪೊಲೀಸರನ್ನು ಬೇಡಿಕೊಂಡ ಆಸಿಡ್ ಸಂತ್ರಸ್ತೆ