ಮೈಸೂರು: ಹಾವೇರಿಯ ಹಾನಗಲ್‍ನಲ್ಲಿ ಮೊದಲೇ ಪೈಪೋಟಿ ನಿರೀಕ್ಷಿಸಿದ್ದೆವು. ಅಂತಿಮ ಫಲಿತಾಂಶಕ್ಕೆ ಸಮಯವಿದೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಹಾನಗಲ್‍ನಲ್ಲಿ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್‍ಗೆ ಮುನ್ನಡೆ ಹೆಚ್ಚಾಗುತ್ತಿದೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಸಿದ್ದರಾಮಯ್ಯ
Advertisement
Advertisement
ಕಬಿನಿ ಡ್ಯಾಂಗೆ ಬಾಗಿನ ಅರ್ಪಿಸಲು ಬಂದ ಸಿಎಂ ಮಾಧ್ಯಮಗಳ ಜೊತೆ ಮಾತನಾಡಿ, ಫಲಿತಾಂಶ ಬರಲು ಇನ್ನೂ ಸಮಯವಿದೆ. ಹಾನಗಲ್‍ನಲ್ಲಿ ಈ ರೀತಿಯ ಪೈಪೋಟಿ ನಿರೀಕ್ಷೆಯಲ್ಲಿದ್ದೆವು. ಯಾವಾಗಲೂ ಅಲ್ಲಿ ಪೈಪೋಟಿ ಇರುತ್ತದೆ. ಆದರೆ ಟಿಕೆಟ್ ವ್ಯತ್ಯಾಸದಿಂದ ಪೈಪೈಪೋಟಿಯಲ್ಲ. ಮೊದಲಿನಿಂದಲೂ ಆ ಕ್ಷೇತ್ರ ಪೈಪೋಟಿಯ ಕ್ಷೇತ್ರವಾಗಿದೆ. ಇನ್ನೂ ಬಹಳ ಸುತ್ತುಗಳಿದೆ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
Advertisement
Advertisement
ಉಪಚುನಾವಣೆಗಳು ರಾಜಕೀಯ ಧೃವಿಕರಣವಾಗುವುದಿಲ್ಲ. ನಂಜನಗೂಡು ಗುಂಡ್ಲುಪೇಟೆ ಉಪಚುನಾವಣೆ ನೋಡಿದ್ದೇವೆ. ಆ ನಿಟ್ಟಿನಲ್ಲಿ ಚರ್ಚೆಯೇ ಸರಿ ಅಲ್ಲ ಎಂದರು. ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆ – ಕಾಂಗ್ರೆಸ್ ಮುನ್ನಡೆ