ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಡಿ ದರ ಹೆಚ್ಚಿರುವ ಹಿನ್ನೆಲೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಈ ಮುನ್ನ ಸಂಕ್ರಾಂತಿ ಬಳಿಕ ರಿಲ್ಯಾಕ್ಸ್ ಮಾಡುವ ಬಗ್ಗೆ ನೋಡೋಣ ಎಂದಿದ್ದ ಬೊಮ್ಮಾಯಿ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್
Advertisement
Advertisement
ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಯಾವ ರೀತಿ ಬೆಳವಣಿಗೆ ಆಗುತ್ತೆ ಅದರ ಅಧಾರದ ಮೇಲೆ ಕ್ರಮ ತೀರ್ಮಾನ ಮಾಡುತ್ತೇನೆ. ಭಾನುವಾರ ರಾಜ್ಯದಲ್ಲಿ 12 ಸಾವಿರ ಕೇಸ್ ದಾಖಲಾಗಿದೆ ಮತ್ತು ಬೆಂಗಳೂರಲ್ಲಿ 9 ಸಾವಿರ ಕೇಸ್ ವರದಿಯಾಗಿದೆ. ಪಾಸಿಟಿವಿಟಿ ರೇಟ್ ಶೇ 6.8ರಷ್ಟು ಆಗಿದೆ. ಬೆಂಗಳೂರಲ್ಲಿ ಶೇ.10ರಷ್ಟಿದೆ. ಇಡೀ ಭಾರತದ ದೇಶದಲ್ಲಿ ಈಗ ನಮ್ಮ ರಾಜ್ಯ 3ನೇ ಸ್ಥಾನದಲ್ಲಿದೆ. ಹೀಗಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನ ತಗೆದುಕೊಳ್ಳುವ ಅವಶ್ಯಕತೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ
Advertisement
Advertisement
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ವೈರಸ್ ರೂಪಾಂತರಿ ತಳಿ ಓಮಿಕ್ರಾನ್ ಪ್ರಕರಣಗಳು ಏರಿಕೆಯಾಗಿದ್ದು, ಕೊರೊನಾ ನಿಯಂತ್ರಿಸಲು ಸರ್ಕಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ವಿಧಿಸಿದೆ. ಜೊತೆಗೆ ಶನಿವಾರ ಹಾಗೂ ಭಾನುವಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ.