ಉಡುಪಿ: ಶಾಸಕರ ಪುತ್ರರೊಬ್ಬರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಸಿಎಂ ವಿರುದ್ಧ ರಾಜ್ಯ ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಕಿಡಿಕಾರಿದರು.
Advertisement
ಉಡುಪಿಯಲ್ಲಿ ಮಾತನಾಡಿದ ಅವರು, ಚೆನ್ನಗಿರಿ ಶಾಸಕ ವಿರೂಪಾಕ್ಷಪ್ಪನ (Madal Virupakshappa) ಬಂಧನ ಆಗಬೇಕು. ಕೈಗಾರಿಕಾ ಸಚಿವ ನಿರಾಣಿಯ (Murugesh Nirani) ತಲೆದಂಡ ಆಗಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ರಾಜೀನಾಮೆ ಕೊಡಬೇಕು. ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಭ್ರಷ್ಟಚಾರಕ್ಕೆ ದಾಖಲೆಯಲ್ಲವೇ?- ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಟಿ
Advertisement
ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿಶ್ವವಿಖ್ಯಾತಿಯನ್ನು ಪಡೆದಿದೆ. ಬೊಮ್ಮಾಯಿ ಮೂಗಿನ ಕೆಳಗೆ ನಡೆದ ಭ್ರಷ್ಟಾಚಾರ ಬಯಲಾಗಿದೆ. ಭ್ರಷ್ಟಾಚಾರದ ಹಣದಲ್ಲಿ ಯಾರಿಗೆಲ್ಲ ಪಾಲು ಇದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು. ಒಳಚರಂಡಿ ಮತ್ತು ನೀರು ಸರಬರಾಜು ಬೋರ್ಡ್‌ನಲ್ಲಿ ಎಷ್ಟು ಸಾವಿರ ಕೋಟಿ ಈವರೆಗೆ ಲೂಟಿ ಮಾಡಿದ್ದೀರಿ? ಒಂದು ವಾರದಲ್ಲಿ ರಾಜ್ಯದ ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ತನಿಖೆ ನಡೆಸಬೇಕು. ಭ್ರಷ್ಟಾಚಾರ ಮತ್ತು ಲೂಟಿಯ ಸಂಪೂರ್ಣ ದಾಖಲೆಯನ್ನು ತೆರೆದಿಡಬೇಕು ಎಂದು ಆಗ್ರಹಿಸಿದರು.
Advertisement
Advertisement
ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಕೋಟಿ, ಕೋಟಿ ರೂ. ಹಣ ಪತ್ತೆ ವಿಚಾರವಾಗಿ ಮಾತನಾಡಿ, ಬಿಜೆಪಿ ಭ್ರಷ್ಟ ಜನತಾ ಪಾರ್ಟಿಯಾಗಿದೆ. ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. 40% ಭ್ರಷ್ಟ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂತಾಗಿದೆ. ಪುತ್ರನ ಮನೆಯಲ್ಲಿ 40 ಲಕ್ಷ ರೂಪಾಯಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿದೆ. 24 ಗಂಟೆ ಒಳಗೆ ಮನೆಯಲ್ಲಿ 6 ಕೋಟಿ ರೂಪಾಯಿ ಪತ್ತೆಯಾಗಿದೆ. ಶಾಸಕ ವಿರುಪಾಕ್ಷಪ್ಪ ಎಲ್ಲಿ ತಲೆಮರಸಿಕೊಂಡಿದ್ದಾರೆ? ಮೈಸೂರು ಸ್ಯಾಂಡಲ್ ಸುವಾಸನೆಯನ್ನು ಭ್ರಷ್ಟ ಮಾಡಿಬಿಟ್ಟಿದ್ದಾರೆ. ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ. ಸಾಬೂನಿನಿಂದ ಎಷ್ಟು ಭ್ರಷ್ಟಾಚಾರವಾಗಿದ್ದರೆ ರಾಜ್ಯದ ಭ್ರಷ್ಟಾಚಾರ ಪ್ರಮಾಣ ಎಷ್ಟು? ಈ ಎಲ್ಲಾ ಭ್ರಷ್ಟಾಚಾರದ ಹಣ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಲೋಕಾಯುಕ್ತ ಭರ್ಜರಿ ಬೇಟೆ- 8.12 ಕೋಟಿ ಹಣ ಸೀಜ್
ರಾಜ್ಯದಲ್ಲಿ ಲೂಟಿ ಹೊಡೆದ ಹಣಕ್ಕೆ ಯಾರು ಜವಾಬ್ದಾರಿ? ಲೂಟಿ ಹೊಡೆದ ಹಣದಲ್ಲಿ ಬಸವರಾಜ ಬೊಮ್ಮಾಯಿ, ಮಂತ್ರಿಗಳಿಗೆ ಎಷ್ಟು ಪಾಲು ಇದೆ? ಕೈಗಾರಿಕಾ ಸಚಿವ ನಿರಾಣಿಯ ತಲೆದಂಡ ಆಗಿಲ್ಲ ಯಾಕೆ? ಕೆಎಸ್‌ಡಿಎಲ್ ಅಧ್ಯಕ್ಷ ಶಾಸಕ ವಿರೂಪಾಕ್ಷಪ್ಪ ತಲೆಮರೆಸಿಕೊಳ್ಳಲು ಬಿಟ್ಟಿದ್ಯಾಕೆ? ಈ ಭ್ರಷ್ಟಾಚಾರದಲ್ಲಿ ಬಸವರಾಜ ಬೊಮ್ಮಾಯಿ ಪಾತ್ರ ಏನು? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಇರುವುದು ಯಾಕೆ? ನರೇಂದ್ರ ಮೋದಿ ಒಂದು ವಾಕ್ಯ ಮಾತನಾಡುತ್ತಿಲ್ಲ ಯಾಕೆ? ಜೆ.ಪಿ.ನಡ್ಡ, ಅಮಿತ್ ಶಾ ಎಲ್ಲಿದ್ದೀರಿ? ಇಡಿ, ಸಿಬಿಐ ಯಾವಾಗ ಕರ್ನಾಟಕಕ್ಕೆ ಬರುತ್ತದೆ. ಶಾಸಕರು, ಮಂತ್ರಿಗಳ, ಮುಖ್ಯಮಂತ್ರಿಗಳ ಮನೆಗೆ ಯಾವಾಗ ದಾಳಿ ಮಾಡುತ್ತೀರಿ? ನಾಡಿನ ಜನರ ಪರವಾಗಿ ಈ ಎಲ್ಲ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ ಎಂದರು.