ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಬೊಮ್ಮಾಯಿ

Public TV
1 Min Read
bommai bengaluru 5

ಬೆಂಗಳೂರು: ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

bommai bengaluru 4

ವಿಶ್ವ ಹೃದಯ ದಿನಾಚರಣೆ ಅಂಗವಾಗಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಇಂದು ಆಯೋಜಿಸಿದ್ದ ಹೃದಯದಿಂದ ಬಾಂಧವ್ಯ ಬೆಳೆಸೋಣ ವಾಕಥಾನ್ ಗೆ ಬೊಮ್ಮಾಯಿ ಅವರು ಚಾಲನೆ ನೀಡಿ ಮಾತನಾಡಿದರು. ಇದನ್ನೂ ಓದಿ: 10 ತಿಂಗಳ ಶಿಕ್ಷೆ ತಪ್ಪಿಸಲು 9 ವರ್ಷದಿಂದ ತಲೆ ಮರೆಸಿಕೊಂಡ ಆರೋಪಿ ಅಂದರ್

ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೃದಯ ಮನುಷ್ಯನ ಅಂಗಗಳ ಪೈಕಿ ಅತ್ಯಂತ ಪ್ರಮುಖ ಅಂಗ ಎಂದ ಅವರು ಹೃದಯಾಘಾತವಾದಾಗ ಪ್ರಾಥಮಿಕ ಚಿಕಿತ್ಸೆ ಕುರಿತಂತೆ ಮಾಹಿತಿ ಪ್ರತಿಯೊಬ್ಬರಿಗೂ ಅತ್ಯಗತ್ಯ ಎಂದು ತಿಳಿಸಿದರು.

bommai bengaluru 2

ಶೇ.60 ರಷ್ಟು ಸಂಭವಿಸುವ ಅಕಾಲಿಕ ಮರಣಗಳಲ್ಲಿ ಶೇ.25 ರಷ್ಟು ಸಾವುಗಳು ಹೃದಯರೋಗದಿಂದ ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಬಿರುಸಿನ ನಡಿಗೆ ಅತ್ಯುತ್ತಮ ವ್ಯಾಯಾಮವಾಗಿದೆ. ರಾಜ್ಯದ ಜನತೆ ಪ್ರತಿದಿನ ಶ್ರಮಜೀವನಕ್ಕೆ ಬದ್ಧರಾಗಿರಬೇಕು. ಕನಿಷ್ಠ ಅರ್ಧ ಗಂಟೆಯಾದರೂ ಬಿರುಸಿನ ನಡಿಗೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕಾರಲ್ಲೇ ಕೂರಿಸಿ ಯುವಕ, ಯುವತಿಯ ವೀಡಿಯೋ ರೆಕಾರ್ಡ್ – 5 ಲಕ್ಷಕ್ಕೆ ಬೆದರಿಕೆ

bommai bengaluru 1

ಬಿರುಸಿನ ನಡಿಗೆಗೆ ಸ್ಫೂರ್ತಿ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದಿನಿಂದ ನಿಯಮಿತವಾಗಿ ವಾಕಿಂಗ್ ಮಾಡುವ ಪ್ರತಿಜ್ಞೆಯನ್ನು ಮುಖ್ಯಮಂತ್ರಿಗಳು ಕೈಗೊಂಡರು. ವ್ಯಕ್ತಿ ಹಾಗೂ ಸಮುದಾಯದ ಆರೋಗ್ಯ ಬಹಳ ಮುಖ್ಯ. ಹೃದಯ ಸದಾ ಬಡಿಯುವ ಅಂಗ, ಇದನ್ನು ಆರೋಗ್ಯಕರವಾಗಿಡುವ ಮೂಲಕ ಆರೋಗ್ಯವಂತ ರಾಜ್ಯವನ್ನು ಕಟ್ಟೋಣ ಎಂದು ತಿಳಿಸಿದರು.

ಈ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಪಿ.ಸಿ ಮೋಹನ್, ಜಿಲ್ಲಾಧಿಕಾರಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *