ಬೆಂಗಳೂರು: ಆರ್‌ಎಸ್‌ಎಸ್ ವಿಚಾರ, ಆದರ್ಶ, ದೇಶಭಕ್ತಿಗೆ ತಲೆಬಾಗುತ್ತೇನೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯ ಬಗ್ಗೆ ಇದೀಗ ಭಾರೀ ಚರ್ಚೆಯಾಗುತ್ತಿದೆ.
Advertisement
ಸೋಮವಾರ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬಿಜೆಪಿ ಆಯೋಜಿಸಿದ್ದ ಅಮೃತ ಭಾರತಿಗೆ ಕನ್ನಡ ಜಾತ್ರೆ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ನಾನಾ ಚರ್ಚೆಗೆ ಗ್ರಾಸವಾಗಿದೆ. ಆರ್‌ಎಸ್‌ಎಸ್ ಸಿದ್ಧಾಂತ ಮತ್ತು ಕಾರ್ಯಶೈಲಿಗೆ ಸಿಎಂ ಹೊಂದಿಕೊಂಡಿಲ್ಲ ಎಂಬ ಆರೋಪಗಳಿಗೆ ಟಾಂಗ್ ಕೊಡಲು ಅಮೃತ ಭಾರತಿಗೆ ಕರುನಾಡ ಜಾತ್ರೆ ವೇದಿಕೆ ಬಳಸಿಕೊಂಡಿದ್ದು, ಪಕ್ಷದೊಳಗೆ ಬೇರೆ ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 5 ಹೊಸ ಯೋಜನೆಗಳನ್ನು ಘೋಷಣೆ ಮಾಡಿದ ಸಿಎಂ
Advertisement
Advertisement
ಆರ್‌ಎಸ್‌ಎಸ್ ವಿಚಾರದಲ್ಲಿ ಬಸವರಾಜ ಬೊಮ್ಮಾಯಿ ಹೊಸ ಘೋಷಣೆ ಮಾಡಿಕೊಂಡಿದ್ದು, ನೆಹರು ವಿಚಾರದಲ್ಲಿ ಅಚ್ಚರಿಯ ಹೆಜ್ಜೆ ಇಟ್ಟಿದ್ದರ ಬಗ್ಗೆ ಭವಿಷ್ಯದ ರಾಜಕೀಯವನ್ನ ಅಳೆಯಲು ಶುರು ಮಾಡಿದ್ದಾರೆ. ಈ ಹಿಂದೆ ವಿಧಾನಸೌಧದ ಹೈಕೋರ್ಟ್ ದಿಕ್ಕಿನ ಕಡೆ ನೆಹರು ಪ್ರತಿಮೆ ಮರುಸ್ಥಾಪನೆ ಮಾಡಿ ಮಾತನಾಡಿದ ಬೊಮ್ಮಾಯಿಯವರು ನೆಹರೂರವರನ್ನು ಹೊಗಳಿದ್ರು. ಆದರೆ ಇದೀಗ ಅವರನ್ನ ಬಿಟ್ಟು ಸರ್ಕಾರಿ ಜಾಹೀರಾತು ನೀಡಿರುವುದನ್ನ ಸಮರ್ಥಿಸಿಕೊಂಡಿರುವ ಬಗ್ಗೆ ಪಕ್ಷದೊಳಗೆ ಹಾಗೂ ರಾಜಕೀಯ ಪಡಸಾಲೆಯಲ್ಲಿ ಹಲವು ಚರ್ಚೆ ಹುಟ್ಟುಹಾಕಿದೆ.