ಮಳೆಯಿಂದ ಹಾನಿಗೊಳಗಾದ ಪ್ರದೇಶ ವೀಕ್ಷಣೆ ಮಾಡಿದ ಬೊಮ್ಮಾಯಿ

Advertisements

ಬೆಂಗಳೂರು: ಮಳೆಯ ಅವಾಂತರದಿಂದ ಬೆಂಗಳೂರಿನ ರಸ್ತೆ, ಮನೆಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು.

Advertisements

ಜೆ.ಸಿ.ನಗರ 60 ಅಡಿ ರಸ್ತೆಯ ಬಳಿ ಕಲ್ವರ್ಟ್, ಜೆ.ಸಿ.ನಗರ 19ನೇ ಮುಖ್ಯ ರಸ್ತೆ, ನಾಗವಾರ ಮೆಟ್ರೋ ಸ್ಟೇಷನ್ ಕಾಮಗಾರಿ, ಹೆಚ್.ಬಿ.ಆರ್.ಲೇಔಟ್  ನೀರುಗಾಲುವೆ, ಹೆಬ್ಬಾಳ ಎಸ್.ಟಿ.ಪಿ ಯನ್ನು ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿಯಲ್ಲಿ ಔಟ್ ಆಫ್ ಔಟ್ ತೆಗೆದ ಬೆಂಗಳೂರಿನ ವಿದ್ಯಾರ್ಥಿಗಳು 

Advertisements

ಈ ವೇಳೆ ಸಚಿವರಾದ ವಿ.ಸೋಮಣ್ಣ, ಕೆ.ಗೋಪಾಲಯ್ಯ, ಆರ್.ಅಶೋಕ್, ಬಿ.ಡಿ.ಎ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಸಂಸದ ಪಿ.ಸಿ.ಮೋಹನ್, ಶಾಸಕ ಭೈರತಿ ಸುರೇಶ್, ಕೆ.ಜೆ.ಜಾರ್ಜ್.

Advertisements

ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಎನ್.ಮಂಜುನಾಥ್ ಪ್ರಸಾದ್, ಪಾಲಿಕೆಯ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಫರ್ವೆಸ್, ಜಲಮಂಡಳಿ ಅಧ್ಯಕ್ಷರಾದ ಜಯರಾಮ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಚೋಳನ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ:  ಶಿಲ್ಪಾ ಪತಿಗೆ ಮತ್ತೆ ಕಾನೂನು ಸಂಕಟ – ಕುಂದ್ರಾ ವಿರುದ್ಧ ಕೇಸ್ ದಾಖಲಿಸಿದ ಇಡಿ 

Advertisements
Exit mobile version