ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ: ಸಿಎಂ

Public TV
1 Min Read

ಬೆಳಗಾವಿ: ಸಿಂದಗಿ ಹಾಗೂ ಹಾನಗಲ್ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

BJP Flag Final 6

ಬೆಳಗಾವಿಯಲ್ಲಿ ಬೊಮ್ಮಾಯಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಿನ್ನೆ ಸಿಂದಗಿಯಲ್ಲಿ ಪ್ರಚಾರ ಮಾಡಿ ಇವತ್ತು ಬೆಂಗಳೂರು ಹೋಗುತ್ತಿದ್ದೇನೆ. ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ಇಂದು ಸಂಜೆ ಹಾನಗಲ್‍ಗೆ ವಾಪಾಸ್ ಆಗ್ತೇನಿ. ಮೂರು ದಿನಗಳ ಕಾಲ ಹಾನಗಲ್ ನಲ್ಲಿ ಪ್ರಚಾರ ಮಾಡುತ್ತೇನೆ. 23ರಂದು ಬೆಳಗಾವಿಗೆ ಬಂದು ಕಿತ್ತೂರು ಚನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ. ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಉತ್ತರಾಖಂಡ್ ಪ್ರವಾಹಪೀಡಿತ ಭಾಗದಲ್ಲಿ 10 ಕನ್ನಡಿಗರಿಗೆ ಸಂಕಷ್ಟ

ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರವಾಗಿ ಮಾತನಾಡಿದ ಅವರು, ಅದರ ಬಗ್ಗೆ ತೀರ್ಮಾನ ಮಾಡುತ್ತೇವೆ. ಕೋವಿಡ್ ಕಡಿಮೆಯಾದ ಹಿನ್ನೆಲೆ ಮೆರವಣಿಗೆ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ತಜ್ಞರ ಜತೆಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ.

karnataka flag design

ಈ ವೇಳೆ ಕಿತ್ತೂರು ಕರ್ನಾಟಕ ಘೋಷಣೆ ವಿಚಾರವಾಗಿ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ತೀರ್ಮಾನವಾಗಬೇಕು ಚರ್ಚಿಸಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ

Share This Article