ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್-19 ಎರಡನೇ ಟೆಸ್ಟ್‌ನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ.
Advertisement
ಜನವರಿ 10 ರಂದು ಬೊಮ್ಮಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಇಂದು ಟೆಸ್ಟ್‌ನಲ್ಲಿ ಕೋವಿಡ್ ನೆಗೆಟಿವ್ ಬಂದಿದ್ದು, ಈ ಮೂಲಕ ಸಿಎಂ ಸೋಂಕಿನಿಂದ ಮುಕ್ತವಾಗಿದ್ದಾರೆ. ಇದನ್ನೂ ಓದಿ: ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
Advertisement
Advertisement
ಕೆಲದಿನಗಳ ಹಿಂದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರ್. ಅಶೋಕ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಮಂದಿಗೆ ಸೋಂಕು ಕಾಣಿಸಿಕೊಂಡು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ನಡುವೆ ಮದ್ಯ ಪಾರ್ಸೆಲ್‌ಗೆ ಅವಕಾಶ ಕೊಡಿ – ಬೊಮ್ಮಾಯಿಗೆ ಮನವಿ
Advertisement
ಮುಖ್ಯಮಂತ್ರಿ @BSBommai ಅವರು, ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ಕೈಗೊಳ್ಳಲಾಗಿರುವ ಪೂರ್ವ ಸಿದ್ದತೆಗಳ ಕುರಿತಂತೆ ತಜ್ಞರು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದು ವರ್ಚುಯಲ್ ಸಭೆ ನಡೆಸಿದರು.
ಆರೋಗ್ಯ ಸಚಿವ @mla_sudhakar ಸೇರಿದಂತೆ ಸಚಿವರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. pic.twitter.com/djB1Ma7PW9
— CM of Karnataka (@CMofKarnataka) January 17, 2022
ಕೊರೊನಾ ನೆಗೆಟಿವ್ ರಿಪೋರ್ಟ್ ಬಂದೊಡನೆ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ಸಂಬಂಧಪಟ್ಟಂತೆ ತಜ್ಞರ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆದಿದೆ.