– ನಾಳೆ ಚಾಮರಾಜನಗರಕ್ಕೆ ರಾಷ್ಟ್ರಪತಿ, ಸಿಎಂ ಭೇಟಿ
ಬೆಂಗಳೂರು/ಚಾಮರಾಜನಗರ: ರಾಜ್ಯಪ್ರವಾಸಕ್ಕೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಶಾಲು ಹೊದಿಸಿ ಬರಮಾಡಿಕೊಂಡರು.
Advertisement
ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯದ ಭೇಟಿಗೆ ಆಗಮಿಸಿದ್ದು, ಈ ವೇಳೆ ಬೊಮ್ಮಾಯಿ ಅವರು ಬೆಂಗಳೂರಿನ ಎಚ್.ಎ.ಎಲ್ ವಿಮಾನನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಹ ಉಪಸ್ಥಿತರಿದ್ದರು.
Advertisement
Advertisement
ಇತ್ತ ನಾಳೆ ಚಾಮರಾಜನಗರ ಜಿಲ್ಲೆಗೆ ರಾಮನಾಥ್ ಕೋವಿಂದ್ ಮತ್ತು ಬೊಮ್ಮಾಯಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭರದ ಸಿದ್ಧತೆ ಕೈಗೊಳ್ಳಲಾಗಿದೆ. ಬಿಳಿಗಿರಿರಂಗನ ಬೆಟ್ಟದ ತಪ್ಪಲಿನಲ್ಲಿರುವ ವಡ್ಡಗೆರೆ ಬಳಿ 3 ಹೆಲಿಪ್ಯಾಡ್ ಹಾಗೂ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ಬಳಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಬಿಳಿಗಿರಿರಂಗನ ಬೆಟ್ಟಕ್ಕೆ ನಾಳೆ ಬೆಳಗ್ಗೆ 11.40ಕ್ಕೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ
Advertisement
ಮಧ್ಯಾಹ್ನ 1.25ಕ್ಕೆ ಚಾಮರಾಜನಗರಕ್ಕೆ ಆಗಮಿಸಲಿದ್ದು, ಇದೇ ವೇಳೆ ಮೈಸೂರಿನಿಂದ ರಸ್ತೆ ಮಾರ್ಗ ಚಾಮರಾಜನಗರಕ್ಕೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ 162 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆಯನ್ನು ರಾಮನಾಥ್ ಕೋವಿಂದ್ ಉದ್ಘಾಟಿಸಲಿದ್ದಾರೆ.
ರಾಮನಾಥ್ ಕೋವಿಂದ್ ಅವರ ಭೇಟಿ ಹಿನ್ನೆಲೆ, ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ 500 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಇಂದು ಮತ್ತು ನಾಳೆ ಬಿಳಿಗಿರಿರಂಗನ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ನಾಳೆ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಟಯರ್ ಸ್ಫೋಟಗೊಂಡು ತಾಯಿ, ಮಗ ಕಾರಿನಲ್ಲೇ ದುರ್ಮರಣ