ಬೆಂಗಳೂರು: ಆರೋಗ್ಯ ವಲಯದ ಮೂಲಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 `ನಮ್ಮ ಕ್ಲಿನಿಕ್’ಗಳಿಗೆ (Namma Clinic) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಫೆ.7ರಂದು ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಕೆ ಸುಧಾಕರ್ (K Sudhakar) ತಿಳಿಸಿದ್ದಾರೆ.
Advertisement
ಮಹಾಲಕ್ಷ್ಮಿ ಬಡಾವಣೆಯ ಮಹಾಲಕ್ಷ್ಮಿಪುರ ವಾರ್ಡ್ನ ಆರಂಭಿಸಿರುವ ನಮ್ಮ ಕ್ಲಿನಿಕ್ (v) ಅನ್ನು ಉದ್ಘಾಟಿಸಲಾಗುತ್ತಿದ್ದು, ಇದೇ ವೇಳೆ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಆರಂಭವಾಗಿರುವ 107 ಕ್ಲಿನಿಕ್ಗಳಿಗೂ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 15 ವರ್ಷ ಏರೋಸ್ಪೇಸ್ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಾಗ್ರಿಗಳ 5 ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಮೋದಿ
Advertisement
Advertisement
ಕಳೆದ ವರ್ಷ ಡಿಸೆಂಬರ್ 14ರಂದು ಬೊಮ್ಮಾಯಿ ಅವರು ಧಾರವಾಡದ ಬೈರದೇವರಕೊಪ್ಪದಲ್ಲಿ `ನಮ್ಮ ಕ್ಲಿನಿಕ್’ ಉದ್ಘಾಟಿಸುವ ಮೂಲಕ ರಾಜ್ಯಾದ್ಯಂತ ಏಕಕಾಲಕ್ಕೆ 100 ನಮ್ಮ ಕ್ಲಿನಿಕ್ಗಳಿಗೆ ಚಾಲನೆ ನೀಡಿದ್ದರು. ನಂತರ ನಮ್ಮ ಕ್ಲಿನಿಕ್ ಸೇವೆಯ ಬಗ್ಗೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದಾಗ, ಸಾರ್ವಜನಿಕರು ಬಹಳ ಸಂತೋಷದಿಂದ ಕೃತಜ್ಞತೆ ಸಲ್ಲಿಸಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿ ಪಾಲಿಕೆ ಮೇಯರ್ ಆಗಿ ಶೋಭಾ ಅವಿರೋಧ ಆಯ್ಕೆ, ರೇಷ್ಮಾ ಉಪಮೇಯರ್
Advertisement
ನಮ್ಮ ಕ್ಲಿನಿಕ್ ಗಳು ನಗರ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸುತ್ತಿವೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಾ ಆರೋಗ್ಯ ಆರೈಕೆಯಲ್ಲಿ ಹೊಸ ಆಯಾಮ ಸೃಷ್ಟಿಸುತ್ತಿವೆ. ಹಾಗಾಗಿ ನಗರ ಪ್ರದೇಶ ವ್ಯಾಪ್ತಿಯಲ್ಲೇ 438 `ನಮ್ಮ ಕ್ಲಿನಿಕ್’ಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k