ಬೆಂಗಳೂರು: ನಾಳೆ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ದೆಹಲಿಗೆ (New Delhi) ಪ್ರಯಾಣ ಬೆಳಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ.
ನಾಳೆ ಮೈಸೂರು ಪ್ರವಾಸದಿಂದ ಬೆಂಗಳೂರಿಗೆ (Bengaluru) ವಾಪಸ್ಸಾದ ಬಳಿಕ ಸಿಎಂ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಅಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ವಿಚಾರ, ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಸಂಪುಟ ವಿಸ್ತರಣೆಗೆ ಮತ್ತೆ ಮರುಜೀವ ಸಿಗುವ ಸಾಧ್ಯತೆಯಿದೆ. ಇದನ್ನೂ ಓದಿ: ಅಡಿಕೆ ಬೆಳೆಗಾರರ ಜೊತೆ ಸರ್ಕಾರ ಇದೆ : ಬೊಮ್ಮಾಯಿ
Advertisement
Advertisement
ಇನ್ನೂ ಗಡಿ ವಿವಾದ ಮಹಾರಾಷ್ಟ್ರ ಕ್ಯಾತೆ ತೆಗೆದಿದ್ದು, ಗಡಿಯಲ್ಲಿ ಶಾಂತಿಯೂ ಕದಡಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮುಕುಲ್ ರೋಹ್ಟಗಿಯವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರದ ಪರ ವಾದ ಮಂಡನೆ ಬಗ್ಗೆ ಚರ್ಚಿಸಲಿದ್ದಾರೆ. ಇನ್ನೂ ಮಂಗಳವಾರ ಸಂಜೆ ದೆಹಲಿಯಿಂದ ವಾಪಸ್ ಆಗುವ ಸಾಧ್ಯತೆಯಿದೆ. ಇದನ್ನೂ ಓದಿ: ಒಂದೇ ವರ್ಷದಲ್ಲಿ 8,000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ: ಬೊಮ್ಮಾಯಿ