ಬೆಂಗಳೂರು: ಮುಂದಿನ ವಾರಾಂತ್ಯದಲ್ಲಿ ದೆಹಲಿಗೆ ಭೇಟಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನಿರ್ಧರಿಸಿದ್ದಾರೆ. ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಬಹಳ ತಿಂಗಳ ಬಳಿಕ ದೆಹಲಿಗೆ (New Delhi) ಸಿಎಂ ಭೇಟಿ ನೀಡಲಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನವೆಂಬರ್ 10 ರಂದು ಕೆಂಪೇಗೌಡರ 108 ಅಡಿ ಉದ್ದದ ಪ್ರತಿಮೆ ಉದ್ಘಾಟನೆಯಿದ್ದು, ಪ್ರಧಾನಿ ಮೋದಿ (Narendra Modi) ಅವರನ್ನು ಆಹ್ವಾನಿಸಲಿದ್ದಾರೆ. ಇದೇ ವೇಳೆ ಅಮಿತ್ ಶಾ, ಜೆ.ಪಿ.ನಡ್ಡಾ ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಬೇರೆಯವರಿಂದ ಅಡ್ಡ ಮತದಾನ ಮಾಡಿಸಿ ನಮ್ಮ ವಿರುದ್ಧ ದೂರು: ಎಚ್‌ಡಿಕೆ, ಎಚ್‌ಡಿಆರ್ ವಿರುದ್ಧ ಶ್ರೀನಿವಾಸ್ ಆರೋಪ
Advertisement
Advertisement
ಚುನಾವಣಾ ತಯಾರಿ ಬಗ್ಗೆ ವರಿಷ್ಠರಿಗೆ ಸಿಎಂ ಮಾಹಿತಿ ನೀಡಲಿದ್ದಾರೆ. ರಾಯಚೂರು ಜಿಲ್ಲೆಗೆ ಏಮ್ಸ್ ಆಸ್ಪತ್ರೆ ಮಂಜೂರು ಕುರಿತು ಕೇಂದ್ರದ ಆರೋಗ್ಯ ಸಚಿವರನ್ನು ಭೇಟಿಯಾಗಲಿದ್ದಾರೆ. ಅಲ್ಲದೇ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ವಳ ನಿರ್ಧಾರದ ಮಾಹಿತಿಯನ್ನು ಕೇಂದ್ರಕ್ಕೆ ತಿಳಿಸಲಿದ್ದಾರೆ.
Advertisement
Advertisement
ಕೇಂದ್ರದಿಂದಲೂ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲು ಮನವಿ ಮಾಡಲಿದ್ದಾರೆ. ಜೊತೆಗೆ ನೀರಾವರಿ ಯೋಜನೆಗಳ ಕುರಿತು ಕೇಂದ್ರದ ಜತೆ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಹಾಟ್‌ಸ್ಪಾಟ್‌ನಲ್ಲಿ ಪ್ರಿಪೇಯ್ಡ್ ಕೌಂಟರ್ – ಆಟೋ ಚಾಲಕರ ಮಾಸ್ಟರ್ ಪ್ಲ್ಯಾನ್