ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಅವರು ಹೃದಯಾಘಾತದಿಂದ ಇಂದು ನಿಧನರಾದರು.
ಇಂದು ಬೆಳಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುವಾಗ ಗುರುಲಿಂಗಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದರು.
Advertisement
Advertisement
ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾದಾಗಿಂದ ಗುರುಲಿಂಗ ಸ್ವಾಮಿ ಮಾಧ್ಯಮ ವಿಭಾಗವನ್ನು ನೋಡಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲದೇ ಕಳೆದ ವರ್ಷದ ಆಗಸ್ಟ್ 20 ರಂದು ಸಿಎಂಗೆ ಮಾಧ್ಯಮ ಸಂಯೋಜಕರಾಗಿ ನೇಮಕವಾಗಿದ್ದರು. ಹಲವು ಪತ್ರಿಕೆಗಳು, ಟಿವಿ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸಿದ್ದ ಇವರು, ಇವತ್ತು ಬೆಳಗ್ಗೆವರೆಗೂ ಸಿಎಂ ವಾಟ್ಸಪ್ ಗ್ರೂಪ್‌ನಲ್ಲಿ ಸಿಎಂ ಕುರಿತ ಮಾಹಿತಿ ಕಳುಹಿಸಿದ್ದರು.
Advertisement
ಗುರುಲಿಂಗಸ್ವಾಮಿ ನಿಧನಕ್ಕೆ ಸಿಎಂ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅಂತಿಮ ದರ್ಶನಕ್ಕೆ ತೆರಳಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ – ಕರಾವಳಿ ಭಾಗಕ್ಕೆ ಈ ವಾರ ಯೆಲ್ಲೋ ಅಲರ್ಟ್