Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೂರು ಕೋಟಿ ಲಸಿಕಾಕರಣದ ಸಾಧನೆಗೆ ಹೆಮ್ಮೆ ಪಡೋಣ, ವಿಶ್ರಮಿಸುವುದು ಬೇಡ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನೂರು ಕೋಟಿ ಲಸಿಕಾಕರಣದ ಸಾಧನೆಗೆ ಹೆಮ್ಮೆ ಪಡೋಣ, ವಿಶ್ರಮಿಸುವುದು ಬೇಡ: ಬೊಮ್ಮಾಯಿ

Dharwad

ನೂರು ಕೋಟಿ ಲಸಿಕಾಕರಣದ ಸಾಧನೆಗೆ ಹೆಮ್ಮೆ ಪಡೋಣ, ವಿಶ್ರಮಿಸುವುದು ಬೇಡ: ಬೊಮ್ಮಾಯಿ

Public TV
Last updated: October 22, 2021 1:02 pm
Public TV
Share
5 Min Read
Bommai
SHARE

-ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಶೇ.90 ರಷ್ಟು ಲಸಿಕಾಕರಣ ಗುರಿ

ಹುಬ್ಬಳ್ಳಿ: ಕೋವಿಡ್ ಅಲೆ ಎದುರಿಸುವ ಕಾರ್ಯವು ರಾಜ್ಯ ಮತ್ತು ದೇಶದ ಆರೋಗ್ಯ ವ್ಯವಸ್ಥೆಯ ಸಾಮಥ್ರ್ಯ ಮತ್ತು ಕೊರತೆಗಳೆರಡನ್ನೂ ಪರಿಚಯಿಸಿದೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳಲ್ಲಿ ಗುಣಾತ್ಮಕ ಮತ್ತು ಗಮನಾರ್ಹ ಅಭಿವೃದ್ಧಿ ತರಲು ಕಾರಣವಾಗಿದೆ. ಭಾರತ ದೇಶದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದಕ್ಕಾಗಿ ಹೆಮ್ಮೆ ಪಡೋಣ ಆದರೆ ವಿಶ್ರಮಿಸುವುದು ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Bommai

ಹುಬ್ಬಳ್ಳಿಯ ಕಿಮ್ಸ್ ಆವರಣದ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ 100 ಕೋಟಿ ಲಸಿಕಾಕರಣ ಭಾರತ ದೇಶದ ಪಯಣ ಕಾರ್ಯಕ್ರಮ ಹಾಗೂ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ಸಮರ್ಪಣೆ ಮಾಡಿ ಮಾತನಾಡಿದ ಅವರು, ವಿಪತ್ತನ್ನು ಕೂಡ ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕು (Convert calamity into opportunity) ಎಂಬ ಮಾತನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ನಿಜ ಎಂದು ಮಾಡಿ ತೋರಿಸಿದೆ. ಕೋವಿಡ್ ವೈರಾಣು ಕಾಲಿಟ್ಟಾಗ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪಿಪಿಇ ಕಿಟ್, ಮಾಸ್ಕ್, ಕೈಗವಸುಗಳಿರಲಿಲ್ಲ. ಇಂದು ಈ ಉತ್ಪನ್ನಗಳನ್ನಷ್ಟೇ ಅಲ್ಲ, ಕೋವಿಡ್ ಲಸಿಕೆಯನ್ನು ಕೂಡ ರಫ್ತು ಮಾಡುವ ಸಾಮರ್ಥ್ಯ ಗಳಿಸಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

bommai 4

ಭಾರತದ ಈ ಸಾಧನೆಗೆ ವಿಶ್ವವೇ ಬೆರಗಾಗಿದೆ. ಕಳೆದ ಜನವರಿ 16 ರಿಂದ ದೇಶದಲ್ಲಿ ಕೋವಿಡ್ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಹಂತ ಹಂತವಾಗಿ ಹೆಚ್ಚಳ ಮಾಡುತ್ತಾ ಇದೀಗ ಕೇವಲ ಹತ್ತು ತಿಂಗಳ ಅವಧಿಯಲ್ಲಿ ನೂರು ಕೋಟಿ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದರ ಹಿಂದೆ ವೈದ್ಯರು, ಅರೆವೈದ್ಯಕೀಯ, ಆರೋಗ್ಯ ಕಾರ್ಯಕರ್ತರ,ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯ ಶ್ರಮವಿದೆ. ಈ ಸಂದರ್ಭದಲ್ಲಿ ಅವರೆಲ್ಲರನ್ನೂ ಅಭಿನಂದಿಸುತ್ತೇನೆ. ಇನ್ನು 3-4 ತಿಂಗಳ ಅವಧಿಯಲ್ಲಿ ಮತ್ತೆ ನೂರು ಕೋಟಿ ಲಸಿಕೆ ನೀಡುವ ಗುರಿ ಇದೆ. ರಾಜ್ಯದಲ್ಲಿಯೂ ಡಿಸೆಂಬರ್ ಅಂತ್ಯದ ವೇಳೆಗೆ ಶೇ.90 ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ.70 ರಷ್ಟು ಎರಡನೇ ಡೋಸ್ ಲಸಿಕೆ ನೀಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ? – ರಮೇಶ್ ಕುಮಾರ್ ವಿರುದ್ಧ ಸುಧಾಕರ್ ವಾಗ್ದಾಳಿ

Bommai

ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುವಾಗ ಲಸಿಕಾಕರಣವೇ ಮದ್ದು ಎಂಬುದು ನೂರು ವರ್ಷಗಳ ಹಿಂದೆಯೇ ಸಾಬೀತಾಗಿದೆ. ಪೆನ್ಸಿಲಿನ್‍ನಿಂದ ಪೋಲಿಯೋವರೆಗೆ ಅನೇಕ ಲಸಿಕೆಗಳು ಮನುಷ್ಯನಿಗೆ ಬಾಹ್ಯವಾಗಿ ಶಕ್ತಿ ತುಂಬಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲಾಗಿದೆ. ವೈರಾಣುಗಳಿಗೆ ಭೌಗೋಳಿಕ ಮತ್ತು ಖಗೋಳಿಯ ಗಡಿಗಳು ಇರುವುದಿಲ್ಲ. ಅಣುಸ್ಫೋಟದಂತೆ ಅದು ವೇಗವಾಗಿ ಹರಡಬಲ್ಲದು. ವೈರಾಣು ರೂಪಾಂತರಗೊಳ್ಳುವುದು ನಮ್ಮ ಮುಂದಿರುವ ಸವಾಲಾಗಿದೆ. ವಿಜ್ಞಾನಿಗಳು ಈ ನಿಟ್ಟಿನಲ್ಲಿ ಸಂಶೋಧನೆಗಳಲ್ಲಿ ಕಾರ್ಯತತ್ಪರರಾಗಿದ್ದಾರೆ. ಕೋವಿಡ್‍ನಿಂದಾಗಿ ದೇಶ ಮಾತ್ರವಲ್ಲ, ಇಡೀ ವಿಶ್ವ ಸಮುದಾಯದ ಒಟ್ಟು ಆರೋಗ್ಯ ಸದೃಢವಾಗಿರಬೇಕು ಎಂಬ ಪಾಠ ಕಲಿತಿದ್ದೇವೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿದೆ. ನಮ್ಮ ರಾಜ್ಯದ ಆಸ್ಪತ್ರೆಗಳಲ್ಲಿ ಒಂದೇ ವರ್ಷದಲ್ಲಿ 1 ಲಕ್ಷ 25 ಸಾವಿರ ಹಾಸಿಗೆಗಳ ಸಾಮರ್ಥ್ಯ ಹೆಚ್ಚಾಗಿದೆ. ನಾಲ್ಕು ಸಾವಿರ ವೈದ್ಯಾಧಿಕಾರಿಗಳ ನೇಮಕ ಮಾಡಿಕೊಳ್ಳಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿಯೂ ಕೂಡ ಆಕ್ಸಿಜನ್ ಬೆಡ್‍ಗಳ ಸೌಲಭ್ಯ ಸ್ಥಾಪನೆಯಾಗಿವೆ. ವೈದ್ಯಕೀಯ ಆಮ್ಲಜನಕ ಉತ್ಪಾದನೆ ಹಾಗೂ ಪೂರೈಕೆ ಸಮರ್ಪಕ ಮತ್ತು ಸಶಕ್ತವಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ : ಸಿದ್ದರಾಮಯ್ಯ

Bommai

ಕಿಮ್ಸ್ ಸೇವೆ ಶ್ಲಾಘನೆ:
ಉತ್ತರ ಕರ್ನಾಟಕದ ಹೆಮ್ಮೆಯ ಹಾಗೂ ಬಡವರ ಪಾಲಿನ ಸಂಜೀವಿನಿ ಎಂದೇ ಹೆಸರಾಗಿರುವ ಹುಬ್ಬಳ್ಳಿ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್)ಯನ್ನು ಈ ಪ್ರದೇಶದ 6 ರಿಂದ 7 ಜಿಲ್ಲೆಗಳು ಅವಲಂಬಿಸಿವೆ. ಕೋವಿಡ್ ಮೊದಲ ಮತ್ತು ಎರಡನೇ ಅವಧಿಯಲ್ಲಿ ಕಿಮ್ಸ್ ನೀಡಿದ ಸೇವೆ ಶ್ಲಾಘನೀಯವಾಗಿದೆ. ಈ ಸಂಸ್ಥೆ ತನ್ನ ಒಟ್ಟು ಸಾಮರ್ಥ್ಯವನ್ನು ಕ್ರೂಢೀಕರಿಸಿ ಸೇವೆ ನೀಡಿದ ಪರಿಣಾಮ ಸಾವಿರಾರು ಜನರ ಪ್ರಾಣ ಉಳಿದಿದೆ. ಬ್ಲ್ಯಾಕ್ ಫಂಗಸ್ ಖಾಯಿಲೆಗೂ ಕೂಡ ಕಿಮ್ಸ್‍ನಲ್ಲಿ ಪರಿಣಾಮಕಾರಿ ಚಿಕಿತ್ಸೆ ದೊರೆತಿರುವುದಕ್ಕೆ ಶ್ಲಾಘಿಸಿದರು. ಇದನ್ನೂ ಓದಿ: 100 ಕೋಟಿ ಕೇವಲ ಅಂಕಿಯಲ್ಲ, ಇತಿಹಾಸದಲ್ಲಿ ದಾಖಲಾದ ಹೊಸ ಅಧ್ಯಾಯ: ಮೋದಿ

Bommai

ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮಾತನಾಡಿ, ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ದೇಶದಲ್ಲಿ ನೂರು ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ವೈದ್ಯರು, ದಾದಿಯರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಇದಕ್ಕಾಗಿ ಕಳೆದ ಒಂದೂವರೆ ವರ್ಷದಿಂದ ಹಗಲಿರುಳು ಶ್ರಮಿಸಿದ್ದಾರೆ. ರಾಜ್ಯದ ಜನತೆ ಸಹಕಾರ ನೀಡಿದ್ದಾರೆ. ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಗಡಿ, ಬೆಟ್ಟ, ಗುಡ್ಡ, ನದಿ, ಸರೋವರಗಳನ್ನು ದಾಟಿ ಲಸಿಕೆಗಳನ್ನು ನೀಡಿದ ಉದಾಹರಣೆಗಳಿವೆ. ಚೀನಾದ ನಂತರ ಅತಿಹೆಚ್ಚು ಲಸಿಕೆ ನೀಡಿದ ದೇಶ ಭಾರತವಾಗಿದೆ. ಮಕ್ಕಳಿಗೆ ನೀಡುತ್ತಿರುವ ಲಸಿಕೆಗಳ ಜೊತೆಗೆ ನ್ಯುಮೋನಿಯಾ ತಡೆಯಲು ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ನೀಡಿಕೆಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಚಾಲನೆ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ. ಮಕ್ಕಳು ದೇಶದ ಹಾಗೂ ಸಮಾಜದ ಆಸ್ತಿ, ಅವರ ಆರೋಗ್ಯ ಸುರಕ್ಷತೆಗೆ ಈ ಲಸಿಕೆ ಪೂರಕವಾಗಲಿದೆ. ಮಗುವಿನ ಒಂದೂವರೆ, ಮೂರುವರೆ ಹಾಗೂ ಒಂಬತ್ತನೇ ತಿಂಗಳ ವಯಸ್ಸಿನಲ್ಲಿ ಈ ಲಸಿಕೆ ಹಾಕಿಸಬೇಕು ಎಂದರು. ಇದನ್ನೂ ಓದಿ: ಚಲಿಸುವ ವಾಹನಗಳಿಂದ ಹತ್ತಿ ಕಳ್ಳತನ – ಪ್ರಾಣವನ್ನೇ ಪಣಕ್ಕಿಟ್ಟು ಓಡುತ್ತಿದ್ದಾರೆ ಮಕ್ಕಳು

Bommai

ಲಸಿಕಾಕರಣಕ್ಕೆ ಶ್ರಮಿಸಿದ ವೈದ್ಯರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಹಂತಗಳ ಅಧಿಕಾರಿಗಳು, ಸಿಬ್ಬಂದಿಯನ್ನು ಗೌರವಿಸುವುದರ ಸಂಕೇತವಾಗಿ ಎಲ್ಲಾ ದರ್ಜೆಗಳ ಅಧಿಕಾರಿ ಹಾಗೂ ಸಿಬ್ಬಂದಿಯ ಪ್ರತಿನಿಧಿಗಳನ್ನು ಮುಖ್ಯಮಂತ್ರಿಗಳು ಸನ್ಮಾನಿಸಿ, ಗೌರವಿಸಿದರು.

Bommai

ಈ ವೇಳೆ, ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್‍ಸಿಂಗ್, ಆರೋಗ್ಯ ಇಲಾಖೆಯ ಆಯುಕ್ತ ಡಾ.ರಂದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ ವ್ಯವಸ್ಥಾಪಕ ನಿರ್ದೇಶಕಿ ಡಾ.ಅರುಂಧತಿ, ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಪ್ರಭು ಬಿರಾದಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಕಿಮ್ಸ್ ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಮತ್ತಿತರರು ಉಪಸ್ಥಿತರಿದ್ದರು.

TAGGED:CM Basavaraja BommaiCoronahubballikimsPM ModiPublic TVSudhakarvaccineಕೀಮ್ಸ್ಕೊರೊನಾಪಬ್ಲಿಕ್ ಟಿವಿಪ್ರಧಾನಿ ಮೋದಿಲಸಿಕೆಸಿಎಂ ಬಸವರಾಜ ಬೊಮ್ಮಾಯಿಸುಧಾಕರ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Gill and Ashwini Gowda
ಕಿತ್ತಾಟದಿಂದ ಕ್ಷಮೆಯತ್ತ – ಒಬ್ಬರಿಗೊಬ್ಬರು Sorry ಕೇಳಿ, ನಗುವಿನ ಅಪ್ಪುಗೆ ನೀಡಿದ ಗಿಲ್ಲಿ, ಅಶ್ವಿನಿ
Cinema Latest Main Post Sandalwood TV Shows
Karunya Ram Samrudhi Ram
25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಕಾರುಣ್ಯಾ ರಾಮ್‌ ದೂರು
Cinema Crime Latest Main Post Sandalwood
Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories

You Might Also Like

Siddaramaiah
Districts

ಕಾಗಿನೆಲೆ ಪೀಠದ ಶ್ರೀಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Public TV
By Public TV
9 minutes ago
DK Shivakumar 9
Bengaluru City

ನಾಳೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಭೇಟಿ ಮಾಡ್ತೀನಿ: ಡಿಕೆಶಿ

Public TV
By Public TV
19 minutes ago
Gavi
Bengaluru City

ʻಸಂಕ್ರಾಂತಿʼ ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಿ – ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ಸೂರ್ಯ ರಶ್ಮಿ

Public TV
By Public TV
33 minutes ago
Tenali Aliya
Latest

ಅಳಿಯನಿಗೆ 158 ಬಗೆಯ ಖಾದ್ಯ ಬಡಿಸಿ ಸಂಕ್ರಾಂತಿ ಸಂಭ್ರಮದಲ್ಲಿ ಮಿಂದೆದ್ದ ಅತ್ತೆ – ಮಾವ!

Public TV
By Public TV
34 minutes ago
Shivagange Hills
Bengaluru Rural

ವಿಸ್ಮಯದಂತೆ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದ ತುದಿಯಲ್ಲಿ ತೀರ್ಥ ಉದ್ಭವ

Public TV
By Public TV
47 minutes ago
v.s.patil
Latest

ಮಾಜಿ ಶಾಸಕ ವಿ.ಎಸ್ ಪಾಟೀಲ್ ಡಬಲ್ ಬ್ಯಾರಲ್ ಬಂದೂಕು ಕಳ್ಳತನ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?