– ನೈಟ್ ಕಫ್ರ್ಯೂ ಸಡಿಲಿಕೆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ
ಹುಬ್ಬಳ್ಳಿ: ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು ಸೆಪ್ಟಂಬರ್ 5ರಂದು ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Advertisement
ಶಿಗ್ಗಾಂವದಲ್ಲಿ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ನೋಡಿಕೊಂಡು ತಜ್ಞರಿಗೆ ವರದಿ ನೀಡಲು ಕೇಳಿದ್ದೇವೆ. ಹೀಗಾಗಿ ಅದನ್ನು ನೋಡಿಕೊಂಡು ತೀರ್ಮಾನವನ್ನು ತೆಗೆದುಕೊಳ್ಳಲಾಗುವುದೆಂದು ಹೇಳಿದರು.ಇದನ್ನೂ ಓದಿ:ಕಾರು ಅಪಘಾತಕ್ಕೂ ಮುನ್ನ ಮದ್ಯ ಖರೀದಿಸಿದ್ದ ಇಷಿತಾ, ಬಿಂದು
Advertisement
ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ ನಿಗಾಯಿಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಎನ್‍ಐಎ ಕೆಲವರನ್ನು ತೆಗೆದುಕೊಂಡಿದೆ. ಎನ್‍ಐಎ ಜೊತೆ ನಮ್ಮ ಪೊಲೀಸರು ಕೂಡಿಕೊಂಡು ಕೆಲಸ ಮಾಡುತ್ತಿದ್ದಾರೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಹಲವಾರು ಕೇಂದ್ರ ಸಚಿವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ:ಬೈ ಎಲೆಕ್ಷನ್‍ನಲ್ಲಿ ಸೋತ್ರೂ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಬಲ ಕೊಟ್ಟಿದ್ದಾರೆ: ಡಿ.ಕೆ.ಶಿವಕುಮಾರ್
Advertisement
Advertisement
ಹುಬ್ಬಳ್ಳಿಗೆ ಬಂದ ಬಳಿಕ ದಾವಣಗೆರೆಗೆ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ. ಅಮಿತ್ ಶಾ ಜೊತೆ ರಾಜ್ಯದ ಹಲವಾರು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಎಂದರು.
ಈಗಾಗಲೇ ನಾವು ವೀಕೆಂಡ್ ಕಫ್ರ್ಯೂ ತೆಗೆದಿದ್ದೇವೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು ನೈಟ್ ಕಫ್ರ್ಯೂ ತೆಗೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಆರ್ಥಿಕ ಚಟುವಟಿಕೆ ಮೇಲೆ ನಿಬಂಧ ಹಾಕುವ ಉದ್ದೇಶ ಸರ್ಕಾರಕ್ಕಿಲ್ಲ. ಕೋವಿಡ್ ನಿರ್ವಹಣೆಯೂ, ನಮಗೆ ಅಷ್ಟೇ ಮುಖ್ಯ. ಕೋವಿಡ್ ನಿಯಂತ್ರಣದಲ್ಲಿರುವ ಜಿಲ್ಲೆಗಳಲ್ಲಿ ನೈಟ್ ಕಫ್ರ್ಯೂ ಸಡಿಲಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ:ಚಾಮರಾಜನಗರ ಡಿಸಿ ವಿರುದ್ಧ ಡಿಕೆಶಿ ಕಿಡಿ