ಗದಗ: ನಮ್ಮ ಅವಧಿಯಲ್ಲಿ ಮಹದಾಯಿ ವಿವಾದಕ್ಕೆ ಖಂಡಿತ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
Advertisement
ನಗರದ ಜಿಮ್ಸ್ ಆಸ್ಪತ್ರೆ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ಮಹದಾಯಿ ವಿಚಾರದ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥವಾಗಿ ವಾದ ಮಂಡಿಸಲಾಗಿದೆ. ಕೆಲವೇ ದಿನಗಳಲ್ಲಿ ಪರಿಷ್ಕೃತ ಪ್ರಾಜೆಕ್ಟ್ ರಿಪೋರ್ಟ್ ಅನ್ನು ಕೇಂದ್ರಕ್ಕೆ ಸಲ್ಲಿಸಲಾಗುತ್ತೆ. ಅಗತ್ಯ ಕ್ರಮ ತೆಗೆದುಕೊಂಡು, ಕಾಮಗಾರಿ ಆರಂಭಕ್ಕೆ ಪ್ರಯತ್ನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಐತಿಹಾಸಿಕ ಮಂಟಪಗಳು, ಶಾಸನಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ: ಕೊಪ್ಪಳ ಜಿಲ್ಲಾಧಿಕಾರಿ
Advertisement
ಪಂಚಮಸಾಲಿ ಮೀಸಲಾತಿಗೆ ಹೋರಾಟದ ಕುರಿತು ಮಾತನಾಡಿದ ಅವರು, ಮೀಸಲಾತಿಗಾಗಿ ಹೋರಾಟ ಮಾಡೋದು ತಪ್ಪೇನಲ್ಲ. ಸರ್ಕಾರವಾಗಿ ನಾವು ಕಾನೂನು ಚೌಕಟ್ಟು ಹಾಗೂ ಸುಪ್ರೀಂ ಕೋರ್ಟ್ ಆದೇಶದಂತೆ ಕೆಲಸ ಮಾಡುತ್ತೇವೆ. ಹಿಂದುಳಿದ ವರ್ಗಗಳ ಆಯೋಗದಿಂದ ಎಲ್ಲ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆಯಲಾಗುತ್ತಿದೆ. ಆಯೋಗದ ರಿಪೋರ್ಟ್ ಬಂದ ಮೇಲೆ ಸರ್ಕಾರ ಮುಂದಿನ ಕೆಲಸ ಮಾಡುತ್ತೆ ಎಂದರು.
Advertisement
Advertisement
ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಜೊತೆ ಸಂಪರ್ಕದಲ್ಲಿದ್ದೇನೆ. ವಿಶ್ವಾಸ ಮೂಡಿಸುವಲ್ಲಿ ಯಶಸ್ವಿಯಾಗಲಿದ್ದೇನೆ. ಈ ವೇಳೆ ಸಚಿವ ಸಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕ ಕಳಕಪ್ಪ ಬಂಡಿ, ಎಸ್.ವಿ.ಸಂಕನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.