BelgaumDistrictsKarnatakaLatestMain Post

ಶೌರ್ಯ, ಶೌರ್ಯೇತರ ಪ್ರಶಸ್ತಿ ಪಡೆದ ಯೋಧರ ಅನುದಾನ ಹೆಚ್ಚಳಕ್ಕೆ ಸಿಎಂ ಅಸ್ತು

– ಪ್ರಶಸ್ತಿಗಳ ವಿವರ ಇಂತಿದೆ

ಬೆಳಗಾವಿ: ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್‌ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡಿ, ಪ್ರಶಸ್ತಿ ಮೊತ್ತದ ಆದೇಶವನ್ನು ಪ್ರಕಟಿಸಿದರು. ಪರಮವೀರಚಕ್ರ ಪಡೆದವರಿಗೆ 25 ಲಕ್ಷ ರೂ.ದಿಂದ 1.5 ಕೋಟಿ ರೂ.ಗಳು, ಮಹಾವೀರಚಕ್ರ ವಿಜೇತರಿಗೆ 12 ಲಕ್ಷ ರೂ.ಗೆ ಬದಲಾಗಿ 1 ಕೋಟಿ ರೂ.ಗಳು, ಅಶೋಕ ಚಕ್ರ ಪಡೆದವರಿಗೆ 25 ಲಕ್ಷ ರೂ.ಗಳಿಗೆ ಬದಲಾಗಿ 1.5 ಕೋಟಿ ರೂ.ಗಳು, ಕೀರ್ತಿ ಚಕ್ರ ಪಡೆವರಿಗೆ 1 ಕೋಟಿ ರೂ.ಗಳು, ವೀರಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಶೌರ್ಯ ಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಸೇನಾ, ನೌಕಾ, ವಾಯು ಸೇನಾ ಮೆಡಲ್ ಪಡೆದವರಿಗೆ 15 ಲಕ್ಷ ರೂ.ಗಳು, ಮೆನ್‌ಶನ್ ಎನ್.ಡಿ.ಎಸ್ ಪ್ಯಾಚ್ ಪಡೆದವರಿಗೆ 15 ಲಕ್ಷ ರೂ.ಗಳನ್ನು ಹೆಚ್ಚಿಸಲು ಆದೇಶವನ್ನು ಹೊರಡಿಸಲಾಗಿದೆ ಎಂದು ವಿವರಿಸಿದರು.

ಪ್ರಶಸ್ತಿ ವಿಜೇತರಿಗೆ ಸುಮಾರು ಐದು ಪಟ್ಟು ಅನುದಾನವನ್ನು ಹೆಚ್ವಿಸಲಾಗಿದೆ. ನಿವೃತ್ತರಾದ ಮೇಲೆ ಉತ್ತಮ ಜೀವನ ನಡೆಸಲು ಹಾಗೂ ಸಾವನ್ನಪ್ಪಿದಾಗ ಅವರ ಕುಟುಂಬಕ್ಕೆ ಸರ್ಕಾರ ಸಹಾಯ ಮಾಡುತ್ತಾ ಬಂದಿದ್ದೇವೆ. ಪ್ರಶಸ್ತಿ ಪಡೆದಾಗಲು ಅವರನ್ನು ಗೌರವಿಸುವ ನಿಟ್ಟಿನಲ್ಲಿ ಅನುದಾನವನ್ನು ಹೆಚ್ವಿಸಲಾಗಿದೆ ಎಂದರು.

ದೇಶದ ತಾಂತ್ರಿಕ ಅಭಿವೃದ್ಧಿಗೆ ಸೇನಾಪಡೆಗಳ ಕೊಡುಗೆ: ಸೇನಾಪಡೆಗಳು ದೇಶದ ರಕ್ಷಣೆ ಮಾತ್ರವಲ್ಲದೆ ಆಂತರಿಕ ಭದ್ರತೆಯನ್ನು ಕಾಪಾಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ದೇಶದ ತಾಂತ್ರಿಕ ಬೆಳವಣಿಗೆಯಲ್ಲಿಯೂ ಸೇನಾಪಡೆಗಳು ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತವೆ. ಸೇನೆಯ ಬಗ್ಗೆ ನಮಗೆ ಅತ್ಯಂತ ಹೆಮ್ಮೆ ಇದೆ. ಪ್ರತಿ ಬಾರಿಯೂ ಗಡಿಯುದ್ದಕ್ಕೂ ಅವರು ಸವಾಲುಗಳನ್ನು ಎದುರಿಸುತ್ತಾರೆ. ಪೂರ್ವ, ಪಶ್ಚಿಮ, ಉತ್ತರ ಗಡಿಗಳಾಗಲಿ, ಅವರಿಗೆ ಎದುರಾದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಶತ್ರುಪಡೆಗಳನ್ನು ಸೋಲಿಸಿದ್ದಾರೆ. ಇದನ್ನೂ ಓದಿ:ಬದುಕಿದ್ದೀವಿ ಎಂದು ತೋರಿಸಲು ಕಾಂಗ್ರೆಸ್ ಪ್ರತಿಭಟನೆ: ಈಶ್ವರಪ್ಪ

ವಿಶೇಷವಾಗಿ 1971 ರಲ್ಲಿ ನಡೆದ ಇಂಡೋ-ಪಾಕಿಸ್ತಾನ ಯುದ್ಧವು ನಮ್ಮ ಸೇನಾಪಡೆಯ ಶಕ್ತಿ, ಬುದ್ದಿವಂತಿಕೆ, ಶೌರ್ಯ ಹಾಗೂ ಮೂರು ರಕ್ಷಣಾ ಪಡೆಗಳ ನಡುವಿನ ಸಮನ್ವಯಕ್ಕೆ ಸಾಕ್ಷಿಯಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿ ಸರ್ಕಾರದ ಸಚಿವರಿಗೆ ಬಿಜೆಪಿ ಶಾಸಕರಿಂದಲೇ ಶಾಕ್..!

ಇದೇ ಸಂದರ್ಭದಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಇತ್ತೀಚೆಗೆ ಮಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಎಲ್ಲರಿಗೂ ಶ್ರದ್ದಾಂಜಲಿ ಸಲ್ಲಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಮೇಜರ್ ಜನರಲ್ ಜೆ.ವಿ. ಪ್ರಸಾದ್ ಇತರರಿದ್ದರು.

Leave a Reply

Your email address will not be published.

Back to top button